ADVERTISEMENT

ಓಮಿಕ್ರಾನ್‌ ಸೋಂಕು ಪ್ರಕರಣ ಹೆಚ್ಚಳ: ವಿದೇಶಿಯರಿಗೆ ಪ್ರವೇಶ ನಿರ್ಬಂಧಿಸಿದ ಇಸ್ರೇಲ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ನವೆಂಬರ್ 2021, 8:44 IST
Last Updated 28 ನವೆಂಬರ್ 2021, 8:44 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜೆರುಸಲೇಮ್: ಇಸ್ರೇಲ್‌ನಲ್ಲಿ ಹೆಚ್ಚುತ್ತಿರುವ ಕೋವಿಡ್‌ ಹೊಸ ತಳಿ ‘ಓಮಿಕ್ರಾನ್‌‘ನ ಸೋಂಕು ಪ್ರಕರಣಗಳನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರವು ಕಠಿಣ ಕ್ರಮಗಳನ್ನು ಜಾರಿಗೊಳಿಸಿದೆ.

ವಿದೇಶಗಳಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ನಿರ್ಬಂಧ ಹೇರಿನಫ್ತಾಲಿ ಬೆನೆಟ್ ನೇತೃತ್ವದ ಸರ್ಕಾರವು ಆದೇಶ ಹೊರಡಿಸಿದೆ.

ಒಂದು ವೇಳೆ ದೇಶದೊಳಗೆ ಪ್ರವೇಶಿಸಬಯಸುವ ಪ್ರಯಾಣಿಕರು ಇಸ್ರೇಲ್‌ ಪ್ರಜೆಗಳಾಗಿದ್ದರೆ, ಅಂತವರು 14 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ.

ADVERTISEMENT

ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿಗೆ (ಬಿ.1.1.529) ‘ಓಮಿಕ್ರಾನ್’ ಎಂಬ ಹೆಸರಿಡಲಾಗಿದೆ. ಇದು ಜಗತ್ತಿನಾದ್ಯಂತ ಭಾರಿ ಕಳವಳ ಮೂಡಿಸಿದ್ದು, ಅತ್ಯಂತ ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ.

ದಕ್ಷಿಣ ಆಫ್ರಿಕಾ, ಬೋಟ್ಸ್‌ವಾನಾ, ಜಿಂಬಾಬ್ವೆ, ನಮೀಬಿಯಾ ಮತ್ತು ಲೆಸೊಟೊ ದೇಶದಲ್ಲಿ ಈ ತಳಿಯ ವೈರಾಣು ತಗುಲಿರುವ ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಆಫ್ರಿಕಾದಲ್ಲಿ ಈ ತಿಂಗಳ ಆರಂಭದಿಂದ ಕೋವಿಡ್‌ ಹೊಸ ಪ್ರಕರಣಗಳ ಸಂಖ್ಯೆ ವಿಪರೀತ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಏರಿಕೆಗೆ ಓಮಿಕ್ರಾನ್ ತಳಿಯೇ ಕಾರಣವಾಗಿರಬಹುದು. ದಕ್ಷಿಣ ಆಫ್ರಿಕಾದ ನೆರೆಯ ದೇಶಗಳಿಗೂ ಈ ರೂಪಾಂತರ ತಳಿಯು ಹರಡಿರಬಹದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಆಫ್ರಿಕಾ ಘಟಕವು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.