ಸಾವು
ಪ್ರಾತಿನಿಧಿಕ ಚಿತ್ರ
ಬೈರೂತ್: ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ಭಾನುವಾರ ಡ್ರೋನ್ ದಾಳಿ ನಡೆಸಿದ್ದು, ಮೂವರು ಮಕ್ಕಳು ಸೇರಿದಂತೆ ಐವರು ಮೃತಪಟ್ಟಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ.
ಮೃತಪಟ್ಟವರಲ್ಲಿ ಮೂವರು ಮಕ್ಕಳು ಮತ್ತು ಅವರ ತಂದೆ ಅಮೆರಿಕ ಪೌರತ್ವ ಹೊಂದಿದ್ದಾರೆ ಎಂದು ಸ್ವೀಕರ್ ನಹೀಬ್ ಬೆರಿ ತಿಳಿಸಿದರು.
ದಾಳಿಯಲ್ಲಿ ಮತ್ತಿಬ್ಬರು ಗಾಯಗೊಂಡಿದ್ದಾರೆ. ಬೈರೂತ್‌ನಲ್ಲಿರುವ ಅಮೆರಿಕ ರಾಯಭಾರಿ ಕಚೇರಿ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ನಾಗರಿಕರೊಂದಿಗೆ ಇರುವ ಹಿಜ್ಬುಲ್ಲಾ ಉಗ್ರರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿತ್ತು. ಆದರೆ ಈ ದಾಳಿಯಲ್ಲಿ ನಾಗರಿಕರು ಮೃತಪಟ್ಟಿದ್ದಾರೆ. ಈ ಕುರಿತು ಪರಿಶೀಲಿಸಲಾಗುವುದು ಎಂದು ಇಸ್ರೇಲ್ ಸೇನೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.