ADVERTISEMENT

ಇಸ್ರೇಲ್-ಹಮಾಸ್ ಶಾಂತಿ ಒಪ್ಪಂದ: ಟ್ರಂಪ್, ನೆತನ್ಯಾಹು ಹೊಗಳಿದ ಪ್ರಧಾನಿ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಅಕ್ಟೋಬರ್ 2025, 7:34 IST
Last Updated 9 ಅಕ್ಟೋಬರ್ 2025, 7:34 IST
<div class="paragraphs"><p>ಇಸ್ರೇಲ್ ಪ್ರಧಾನಿ&nbsp;ಬೆಂಜಮಿನ್  ನೆತನ್ಯಾಹು ಮತ್ತು ನರೇಂದ್ರ ಮೋದಿ</p></div>

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ನರೇಂದ್ರ ಮೋದಿ

   

–ಪಿಟಿಐ ಚಿತ್ರ

ಮುಂಬೈ: ಇಸ್ರೇಲ್-ಹಮಾಸ್ ನಡುವಿನ ಶಾಂತಿ ಒಪ್ಪಂದವನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದು, ‘ಇದು ಗಾಜಾದ ಜನರಿಗೆ ನೆಮ್ಮದಿ ತಂದುಕೊಡುವುದರ ಜತೆಗೆ ಶಾಶ್ವತವಾಗಿ ಶಾಂತಿ ನೆಲೆಸಲು ದಾರಿ ಮಾಡಿಕೊಡುತ್ತದೆ ಎಂದು ನಾವು ಭಾವಿಸುತ್ತೇವೆ’ ಎಂದಿದ್ದಾರೆ.

ADVERTISEMENT

‘ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರ ಶಾಂತಿ ಯೋಜನೆಯ ಮೊದಲ ಹಂತದ ಅನುಷ್ಠಾನವನ್ನು ನಾವು ಸ್ವಾಗತಿಸುತ್ತೇವೆ. ಇದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಬಲವಾದ ನಾಯಕತ್ವದ ಪ್ರತಿಬಿಂಬವೂ ಆಗಿದೆ’ ಎಂದು ಮೋದಿ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಶಾಂತಿ ಯೋಜನೆಯ ಮೊದಲ ಹಂತದ ಅನುಷ್ಠಾನದ ಭಾಗವಾಗಿ ಇಸ್ರೇಲ್ ಮತ್ತು ಹಮಾಸ್, ಯುದ್ಧವನ್ನು ನಿಲ್ಲಿಸುವುದರ ಜತೆಗೆ ಒತ್ತೆಯಾಳುಗಳು ಹಾಗೂ ಕೈದಿಗಳನ್ನು ಬಿಡುಗಡೆ ಮಾಡಲು ಒಪ್ಪಿಕೊಂಡಿವೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.

‘ಎಲ್ಲಾ ಒತ್ತೆಯಾಳುಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ. ಶಾಶ್ವತವಾಗಿ ಶಾಂತಿ ನೆಲೆಸುವ ನಿಟ್ಟಿನಲ್ಲಿ ಇಸ್ರೇಲ್ ಮತ್ತು ಹಮಾಸ್ ಬಂಡುಕೋರ ಸಂಘಟನೆಯ ಪ್ರತಿನಿಧಿಗಳು ಮೊದಲ ಹೆಜ್ಜೆಯನ್ನು ಇಟ್ಟಿದ್ದಾರೆ. ಶಾಂತಿ ಯೋಜನೆ ಕುರಿತು ನ್ಯಾಯಯುತವಾಗಿ ನಡೆದುಕೊಳ್ಳುತ್ತಾರೆ ಎಂಬ ವಿಶ್ವಾಸ ನನಗಿದೆ’ ಎಂದು ಟ್ರಂಪ್ ವಿವರಿಸಿದ್ದಾರೆ.

ಇಸ್ರೇಲ್-ಹಮಾಸ್ ಕದನ ವಿರಾಮ ಮಾತುಕತೆಗಳು ಮುಂದುವರಿಯುತ್ತಿರುವುದರಿಂದ ಮುಂದಿನ ವಾರ ಮಧ್ಯಪ್ರಾಚ್ಯಕ್ಕೆ ಪ್ರವಾಸ ಕೈಗೊಳ್ಳುವ ಬಗ್ಗೆ ಯೋಚಿಸುತ್ತಿರುವುದಾಗಿಯೂ ಟ್ರಂಪ್ ಹೇಳಿದ್ದಾರೆ ಎಂದು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.