ಖಾನ್ ಯೂನಿಸ್‌ನ ಪ್ರದೇಶವೊಂದರಲ್ಲಿ ಆಟವಾಡುತ್ತರುವ ಮಕ್ಕಳು
– ರಾಯಿಟರ್ಸ್ ಚಿತ್ರ
ಜರುಸಲೇಮ್: ಪ್ಯಾಲೆಸ್ಟೀನ್ ಮೇಲೆ ಇಸ್ರೇಲ್ ಬುಧವಾರ ನಡೆಸಿದ ದಾಳಿಯಲ್ಲಿ 25 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ವೆಸ್ಟ್‌ಬ್ಯಾಂಕ್‌ನಲ್ಲಿ ಐವರು ಪ್ಯಾಲೆಸ್ಟೀನಿಯನ್ನರು ಮೃತಪಟ್ಟಿದ್ದಾರೆ. ಗಾಜಾಪಟ್ಟಿಯಲ್ಲಿ 16 ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 20 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.
ಇಸ್ರೇಲ್–ಹಮಾಸ್ ಯುದ್ಧ ಆರಂಭವಾದ ನಂತರ ಇದುವರೆಗೆ 40,000 ಪ್ಯಾಲೆಸ್ಟೀನಿಯನ್ನರು ಮೃತಪಟ್ಟಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.