ಜೇರುಸಲೇಂ: ಟೆಹ್ರಾನ್‌ನಲ್ಲಿ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆಗೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದು ನಿಶ್ಚಿತ ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ತಿಳಿಸಿದ್ದಾರೆ.
ಭಾನುವಾರ ತಡರಾತ್ರಿ ಇಟಲಿಯ ವಿದೇಶಾಂಗ ಸಚಿವ ಆಂಟೋನಿಯೊ ತಜಾನಿ ಅವರೊಂದಿಗೆ ದೂರವಾಣಿ ಮೂಲಕ ನಡೆಸಿದ ಸಂವಾದದ ವೇಳೆ ಅವರು ಈ ಹೇಳಿಕೆ ನೀಡಿದ್ದಾರೆ.
‘ಟೆಹ್ರಾನ್‌ನಲ್ಲಿ ಇಸ್ರೇಲ್ ನಡೆಸಿದ್ದ ಭಯೋತ್ಪಾದಕ ದಾಳಿಗೆ ಇರಾನ್ ಪ್ರತ್ಯುತ್ತರ ನೀಡುವುದು ನಿಶ್ಚಿತ. ಇದೇ ವಿಚಾರವಾಗಿ ಉಭಯ ದೇಶಗಳ ನಡುವೆ ಸಂಘರ್ಷ ಉಲ್ಬಣಗೊಂಡರೂ ಅದಕ್ಕೆ ನಾವು ಹೆದರುವುದಿಲ್ಲ. ಅಲ್ಲದೇ, ಇಸ್ರೇಲ್‌ನಂತೆ, ಸಂಘರ್ಷ ಉಲ್ಬಣಸಲಿ ಎಂದೂ ಇರಾನ್ ಬಯಸುವುದಿಲ್ಲ‘ ಎಂದು ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.