ADVERTISEMENT

Israel-Iran Conflict|ಇರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ; ಉದ್ವಿಗ್ನ ಸ್ಥಿತಿ

ರಾಯಿಟರ್ಸ್
Published 13 ಜೂನ್ 2025, 2:06 IST
Last Updated 13 ಜೂನ್ 2025, 2:06 IST
<div class="paragraphs"><p>ಇಸ್ರೇಲ್ ದಾಳಿಯಿಂದ ಇರಾನ್‌ನ ಟೆಹ್ರಾನ್ ನಗರದ ಕಟ್ಟಡಕ್ಕೆ ಹಾನಿ</p></div>

ಇಸ್ರೇಲ್ ದಾಳಿಯಿಂದ ಇರಾನ್‌ನ ಟೆಹ್ರಾನ್ ನಗರದ ಕಟ್ಟಡಕ್ಕೆ ಹಾನಿ

   

(ರಾಯಿಟರ್ಸ್ ಚಿತ್ರ)

ಜೆರುಸಲೇಂ/ಟೆಹ್ರಾನ್: ಇರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ. ಇಸ್ರೇಲ್ ದಾಳಿಯನ್ನು ಇರಾನ್ ಖಚಿತಪಡಿಸಿದ್ದು, ಉದ್ನಿಗ್ನ ಸ್ಥಿತಿ ನಿರ್ಮಾಣವಾಗಿದೆ.

ADVERTISEMENT

ಟೆಹ್ರಾನ್‌‍ನಲ್ಲಿ ಭಾರಿ ಸ್ಫೋಟದ ಸದ್ದುಗಳು ಕೇಳಿಸಿವೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಸಾವು-ನೋವಿನ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ.

ಟೆಹ್ರಾನ್ ಮೇಲೆ ಕ್ಷಿಪಣಿ ಹಾಗೂ ಡ್ರೋನ್ ದಾಳಿ ಬೆನ್ನಲ್ಲೇ ಇರಾನ್‌ನಿಂದ ಪ್ರತಿ ದಾಳಿ ನಿರೀಕ್ಷೆ ಮಾಡುತ್ತಿರುವ ಇಸ್ರೇಲ್ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.

ಅಣ್ವಸ್ತ್ರ ಹಾಗೂ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಕೇವಲ 5 ದಿನಗಳಲ್ಲಿ ಪರಮಾಣು ಬಾಂಬ್ ತಯಾರಿಕೆ ಮಾಡುವ ಸಾಮಗ್ರಿ ಇರಾನ್ ಬಳಿ ಇದೆ ಎಂದು ಇಸ್ರೇಲ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅತ್ತ ಇಸ್ರೇಲ್‌ನಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು, ಪ್ರತಿದಾಳಿಗೆ ವಾಯು ರಕ್ಷಣಾ ವ್ಯವಸ್ಥೆ ಪೂರ್ಣ ಸಿದ್ಧವಾಗಿದೆ ಎಂದು ಇರಾನ್‌ನ ಸರ್ಕಾರಿ ಟಿ.ವಿ ತಿಳಿಸಿದೆ.

ತೈಲ ಬೆಲೆ ಏರಿಕೆ, ಜಾಗತಿಕ ಷೇರುಪೇಟೆ ಕುಸಿತ...

ಇಸ್ರೇಲ್ ಹಾಗೂ ಇರಾನ್ ಸಂಘರ್ಷದಿಂದಾಗಿ ಅನಿಶ್ಚಿತತೆ ಮುಂದುವರಿದಿದೆ. ದಾಳಿ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆ ಕಂಡಿದ್ದು, ಜಾಗತಿಕ ಷೇರುಪೇಟೆಯಲ್ಲಿ ಭಾರಿ ಪತನ ದಾಖಲಾಗಿದೆ.

ಕಾರ್ಯಾಚರಣೆ ಮುಂದುವರಿಯಲಿದೆ: ಇಸ್ರೇಲ್ ಪ್ರಧಾನಿ

'ಇರಾನ್‌ನ ಅಣ್ವಸ್ತ್ರ ಹಾಗೂ ಮಿಲಿಟರಿ ಭೀತಿಯನ್ನು ನಿರ್ಮೂಲನೆ ಮಾಡುವವರೆಗೂ ಈ ಕಾರ್ಯಾಚರಣೆಯು ಮುಂದುವರಿಯಲಿದೆ' ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಘೋಷಿಸಿದ್ದಾರೆ.

ಅಲ್ಲದೆ ಇಸ್ರೇಲ್ ನಡೆಸಿರುವ ಕಾರ್ಯಾಚರಣೆಯನ್ನು 'ರೈಸಿಂಗ್ ಲಯನ್' ಎಂದು ಸಂಬೋಧಿಸಿದ್ದಾರೆ.

'ನಾವು ಇರಾನ್ ಅಣ್ವಸ್ತ್ರ ಯೋಜನೆಯ ಮೇಲೆ ದಾಳಿ ನಡೆಸಿದ್ದೇವೆ. ಇರಾನ್‌ನ ಗುರಿ ನಿರ್ದೇಶಿತ ಕ್ಷಿಪಣಿ ಯೋಜನೆಯ ಮೇಲೆಯೂ ದಾಳಿ ನಡೆಸಲಾಗಿದೆ' ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.