ADVERTISEMENT

ಇರಾನ್ ಮೇಲೆ ಇಸ್ರೇಲ್ ದಾಳಿ: ಅಮೆರಿಕಕ್ಕೆ ಯಾವುದೇ ಸಂಬಂಧವಿಲ್ಲ ಎಂದ ಟ್ರಂಪ್

ರಾಯಿಟರ್ಸ್
Published 15 ಜೂನ್ 2025, 6:18 IST
Last Updated 15 ಜೂನ್ 2025, 6:18 IST
<div class="paragraphs"><p>ಡೊನಾಲ್ಡ್ ಟ್ರಂಪ್</p></div>

ಡೊನಾಲ್ಡ್ ಟ್ರಂಪ್

   

ವಾಷಿಂಗ್ಟನ್: ಇರಾನ್‌ನ ಪರಮಾಣು ಘಟಕಗಳು ಮತ್ತು ಸೇನಾ ನೆಲೆಗಳನ್ನು ಗುರಿಯಾಗಿಸಿ ಇಸ್ರೇಲ್‌ ಸೇನೆ ನಡೆಸಿದ ವೈಮಾನಿಕ ದಾಳಿಗೂ ಅಮೆರಿಕಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ.

‘ಒಂದು ವೇಳೆ ಇರಾನ್ ಯಾವುದೇ ರೀತಿಯಲ್ಲಿ ಅಮೆರಿಕದ ಮೇಲೆ ದಾಳಿ ಮಾಡಿದರೆ, ಹಿಂದೆಂದೂ ನೋಡಿರದ ಮಟ್ಟದಲ್ಲಿ ಅಮೆರಿಕದ ಮಿಲಿಟರಿಯ ಬಲವನ್ನು ಎದುರಿಸಬೇಕಾಗುತ್ತದೆ’ ಎಂದೂ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

ADVERTISEMENT

‘ಇರಾನ್ ಮತ್ತು ಇಸ್ರೇಲ್ ನಡುವೆ ಸುಲಭವಾಗಿ ಒಪ್ಪಂದ ಮಾಡಿಕೊಳ್ಳಬಹುದು ಮತ್ತು ಈ ರಕ್ತಸಿಕ್ತ ಸಂಘರ್ಷವನ್ನು ಕೊನೆಗೊಳಿಸಬಹುದು’ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮ ವೇದಿಕೆ 'ಟ್ರುತ್ ಸೋಶಿಯಲ್‌'ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಇರಾನ್‌ ತನ್ನ ಪರಮಾಣು ಯೋಜನೆಗಳನ್ನು ಸ್ಥಗಿತಗೊಳಿಸುವ ಸಂಬಂಧ ಶೀಘ್ರ ಒಪ್ಪಂದಕ್ಕೆ ಬರಬೇಕು’ ಎಂದು ಡೊನಾಲ್ಡ್‌ ಟ್ರಂಪ್‌ ಅವರು ಶನಿವಾರ ಒತ್ತಾಯಿಸಿದ್ದರು.

ಮಧ್ಯ ಪ್ರಾಚ್ಯದಲ್ಲಿ ಪ್ರಕ್ಷುಬ್ದ ಪರಿಸ್ಥಿತಿ ನಿರ್ಮಾಣವಾಗಿರುವ ಬೆನ್ನಲ್ಲೇ ಹೇಳಿಕೆ ನೀಡಿದ್ದ ಟ್ರಂಪ್‌, ‘ಇನ್ನಷ್ಟು ವಿನಾಶವಾಗುವ ಮುನ್ನ ಇರಾನ್‌ ನಾಯಕತ್ವವು ಒಪ್ಪಂದಕ್ಕೆ ಬರಲು ಎರಡನೇ ಅವಕಾಶವಿದೆ. ಒಂದು ಕಾಲದಲ್ಲಿ ಇರಾನ್‌ ಸಾಮ್ರಾಜ್ಯ ಎಂದು ಕರೆಯಲ್ಪಡುತ್ತಿತ್ತು, ಈಗ ಅವರಿಗೂ ಏನೂ ಉಳಿದಿಲ್ಲ’ ಎಂದು ಹೇಳಿದ್ದರು.

‘ಇರಾನ್‌ನ ಪರಿಸ್ಥಿತಿ ಕುರಿತಂತೆ ರಾಷ್ಟ್ರೀಯ ಭದ್ರತಾ ತಂಡದ ಜೊತೆ ಮಾತುಕತೆ ನಡೆಸಿದ್ದೇನೆ. ದಾಳಿಯಲ್ಲಿ ನಮ್ಮ ದೇಶದ ಯಾವುದೇ ಪಾತ್ರವಿಲ್ಲ. ಆದರೆ, ಇರಾನ್‌ ಮೇಲಿನ ದಾಳಿಗೆ ಅಮೆರಿಕದ ಶಸ್ತ್ರಾಸ್ತ್ರಗಳನ್ನು ಇಸ್ರೇಲ್‌ ಬಳಸಿಕೊಂಡಿದೆ’ ಎಂದು ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.