ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್‌ನ ಟೆಹ್ರಾನ್‌ನಲ್ಲಿ ಕಟ್ಟಡಕ್ಕೆ ಹಾನಿ
(ರಾಯಿಟರ್ಸ್ ಚಿತ್ರ)
ನವದೆಹಲಿ: ಇಸ್ರೇಲ್ ಹಾಗೂ ಇರಾನ್ ನಡುವೆ ಉಂಟಾಗಿರುವ ಸಂಘರ್ಷಕ್ಕೆ ಸಂಬಂಧಿಸಿದಂತೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಪರಿಸ್ಥಿತಿ ಮೇಲೆ ಸೂಕ್ಷ್ಮ ನಿಗಾ ವಹಿಸಿದೆ ಎಂದು ಹೇಳಿದೆ.
ಪಶ್ಚಿಮ ಏಷ್ಯಾದಲ್ಲಿ ಇದೀಗ ಉಂಟಾಗಿರುವ ಉದ್ವಿಗ್ನ ಸ್ಥಿತಿ ಮತ್ತಷ್ಟು ಹೆಚ್ಚಿಸದಂತೆ ಉಭಯ ದೇಶಗಳು ಎಚ್ಚರಿಕೆ ವಹಿಸುವಂತೆಯೂ ಒತ್ತಾಯಿಸಿತು.
ರಾಜತಾಂತ್ರಿಕವಾಗಿ ವಿವಾದವನ್ನು ಶಮನಗೊಳಿಸಲು ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿನಂತಿಸಿದೆ.
ಉಭಯ ದೇಶಗಳೊಂದಿಗೆ ಭಾರತ ನಿಕಟ ಹಾಗೂ ಸ್ನೇಹಪರ ಬಾಂಧವ್ಯವನ್ನು ಹೊಂದಿದೆ. ಸಾಧ್ಯವಾದ ಎಲ್ಲ ಬೆಂಬಲವನ್ನು ನೀಡಲು ಸಿದ್ಧವಾಗಿದೆ ಎಂದೂ ಹೇಳಿದೆ.
ಈ ಪ್ರದೇಶದಲ್ಲಿರುವ ಭಾರತೀಯ ಪ್ರಜೆಗಳು ಎಚ್ಚರಿಕೆಯಿಂದ ಇರುವಂತೆಯೂ ಕೇಂದ್ರ ವಿದೇಶಾಂಗ ಸಚಿವಾಲಯ (ಎಂಇಎ) ಸಲಹೆ ನೀಡಿದೆ.
ಅಲ್ಲದೆ ಸ್ಥಳೀಯ ಆಡಳಿತದ ಭದ್ರತಾ ಸಲಹೆಗಳನ್ನು ಪಾಲನೆ ಮಾಡುವಂತೆಯೂ ಸೂಚಿಸಿದೆ.
ಅಂತರರಾಷ್ಟ್ರೀಯ ಮಾಧ್ಯಮಗಳ ವರದಿಗಳ ಪ್ರಕಾರ, ಅಣ್ವಸ್ತ್ರ ಕೇಂದ್ರಗಳನ್ನು ಗುರಿಯಾಗಿಸಿ ಇರಾನ್‌ನ ರಾಜಧಾನಿ ಟೆಹ್ರಾನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಇಸ್ರೇಲ್ ದಾಳಿ ನಡೆಸಿದೆ. ಇರಾನ್ ಪ್ರತಿದಾಳಿ ಕೂಡ ನಡೆಸಿದೆ ಎಂದು ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.