ಡೊನಾಲ್ಡ್ ಟ್ರಂಪ್
(ರಾಯಿಟರ್ಸ್ ಚಿತ್ರ)
ವಾಷಿಂಗ್ಟನ್: 'ಇಸ್ರೇಲ್ ಮತ್ತು ಇರಾನ್ ದೇಶಗಳು ಯುದ್ಧವನ್ನು ನಿಲ್ಲಿಸಲು ಬಯಸಿದ್ದವು' ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಇಸ್ರೇಲ್ ಮತ್ತು ಇರಾನ್ ಪೂರ್ಣ ಪ್ರಮಾಣದ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದಾರೆ ಎಂದು ಹೇಳಿದ ಬೆನ್ನಲ್ಲೇ ಟ್ರಂಪ್ ಅವರಿಂದ ಈ ಹೇಳಿಕೆ ಬಂದಿದೆ.
ಸಾಮಾಜಿಕ ಮಾಧ್ಯಮ 'ಟ್ರುತ್'ನಲ್ಲಿ ಈ ಕುರಿತು ಬರೆದಿರುವ ಟ್ರಂಪ್, 'ಪರಮಾಣು ಸಾಮರ್ಥ್ಯದ ಎಲ್ಲ ಸೌಲಭ್ಯಗಳನ್ನು ನಾಶಪಡಿಸಿದ ಬಳಿಕ ಯುದ್ಧವನ್ನು ನಿಲ್ಲಿಸಲು ಸಾಧ್ಯವಾಗಿರುವುದು ನನಗೆ ದೊರಕಿರುವ ಗೌರವ' ಎಂದು ಹೇಳಿದ್ದಾರೆ.
ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ನಡುವೆ ಇರಾನ್‌ನ ಮೂರು ಪರಮಾಣು ಘಟಕಗಳ ಮೇಲೆ ಅಮೆರಿಕ ಬಾಂಬ್ ದಾಳಿ ನಡೆಸಿತ್ತು. ಇದಕ್ಕೆ ಪ್ರತೀಕಾರವಾಗಿ ಕತಾರ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ದಾಳಿ ನಡೆಸಿತ್ತು.
ಆದರೆ ನಂತರ ನಡೆದ ಕ್ಷಿಪ್ರ ಬೆಳವಣಿಗೆಯಲ್ಲಿ ಇರಾನ್ ಹಾಗೂ ಇಸ್ರೇಲ್ ನಡುವೆ ಕದನ ವಿರಾಮ ಏರ್ಪಟ್ಟಿದೆ ಎಂದು ಟ್ರಂಪ್ ಘೋಷಿನೆ ಮಾಡಿದ್ದರು. ಅಲ್ಲದೆ ಕದನ ವಿರಾಮ ಉಲ್ಲಂಘಿಸಿದಂತೆ ಉಭಯ ದೇಶಗಳಿಗೆ ಸೂಚನೆ ನೀಡಿದ್ದರು. ಬಳಿಕ ಕದನ ವಿರಾಮ ಒಪ್ಪಂದವನ್ನು ಇಸ್ರೇಲ್ ಹಾಗೂ ಇರಾನ್ ಒಪ್ಪಿಕೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.