ಇಸ್ರೇಲ್ ಇರಾನ್ ಧ್ವಜ
– ರಾಯಿಟರ್ಸ್ ಚಿತ್ರ
ಟೆಲ್ ಅವೀವ್: ಇರಾನ್‌ನೊಂದಿಗೆ ಸುದೀರ್ಘ ಯುದ್ಧದ ಸಾಧ್ಯತೆಗೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ಇಸ್ರೇಲ್‌ನ ರಕ್ಷಣಾ ವಕ್ತಾರರು ಹೇಳಿದ್ದಾರೆ.
ಇರಾನ್‌ನ ಪರಮಾಣು ನೆಲೆಗಳನ್ನು ನಾಶಪಡಿಸುವುದು ನಮ್ಮ ಗುರಿಯಾಗಿದೆ ಎಂದು ಅವರು ಹೇಳಿದ್ದಾರೆ.
ನಮ್ಮ ಸೈನ್ಯಕ್ಕೆ ದೀರ್ಘಕಾಲದ ಕಾರ್ಯಾಚರಣೆಗೆ ಸಿದ್ಧರಾಗಲೂ ಸೂಚಿಸಲಾಗಿದ್ದು ಮುಂದಿನ ಕಾರ್ಯಾತಂತ್ರಗಳ ಕುರಿತಂತೆ ಚರ್ಚೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ನಮ್ಮ ಕಾರ್ಯಾಚರಣೆಯನ್ನು ಅಮೆರಿಕ ಬೆಂಬಲಿಸುವ ಸಾಧ್ಯತೆ ಇದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ಈ ನಡುವೆ ಟ್ರಂಪ್ ಆಡಳಿತ ಇಸ್ರೇಲ್‌ನ ಮಿಲಿಟರಿ ಕಾರ್ಯಾಚರಣೆಗೆ ಸೇರಿದರೆ ಕೆಂಪು ಸಮುದ್ರದಲ್ಲಿ ಅಮೆರಿಕದ ಹಡಗುಗಳ ಮೇಲೆ ದಾಳಿಗಳನ್ನು ಪುನರಾರಂಭಿಸುವುದಾಗಿ ಯೆಮೆನ್‌ನಲ್ಲಿರುವ ಇರಾನ್ ಬೆಂಬಲಿತ ಹೌತಿ ಬಂಡುಕೋರರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.