ADVERTISEMENT

ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಹತ್ಯೆ ಗ್ಯಾರಂಟಿ: ಇಸ್ರೇಲ್‌

ಏಜೆನ್ಸೀಸ್
Published 4 ಮಾರ್ಚ್ 2026, 7:33 IST
Last Updated 4 ಮಾರ್ಚ್ 2026, 7:33 IST
<div class="paragraphs"><p>ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮತ್ತು&nbsp;ಅಯತೊಲ್ಲಾ ಅಲಿ ಖಮೇನಿ</p></div>

ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮತ್ತು ಅಯತೊಲ್ಲಾ ಅಲಿ ಖಮೇನಿ

   

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷ ಬೆದರಿಕೆ ಹಾಕಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಇಸ್ರೇಲ್‌ ಅನ್ನು ನಾಶಪಡಿಸುವ, ಅಮೆರಿಕ ಮತ್ತು ಇತರ ದೇಶಗಳಿಗೆ ಬೆದರಿಕೆ ಒಡ್ಡುವ, ತಮ್ಮದೇ ಜನರನ್ನು ಹತ್ತಿಕ್ಕುವ ಕಾರ್ಯವನ್ನು ಮುಂದುವರಿಸುವ ಇರಾನ್‌ ಭಯೋತ್ಪಾದಕ ಆಡಳಿತವು ಯಾರನ್ನೇ ನಾಯಕನನ್ನಾಗಿ ನೇಮಿಸಿದರೂ ಅವರನ್ನು ಸಂಹಾರ ಮಾಡುತ್ತೇವೆ’ ಎಂದು ಬರೆದುಕೊಂಡಿದ್ದಾರೆ.

ADVERTISEMENT

ಏನತ್ಮಧ್ಯೆ, ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವ ಜವಾಬ್ದಾರಿ ಹೊಂದಿರುವ ಇರಾನ್‌ನ 'ಅಸೆಂಬ್ಲಿ ಆಫ್ ಎಕ್ಸ್‌ಪರ್ಟ್ಸ್'ಗೆ ಸಂಬಂಧಿಸಿದ ಕಟ್ಟಡವೊಂದನ್ನು ಇಸ್ರೇಲ್ ಮಂಗಳವಾರ ಗುರಿಯಾಗಿಸಿಕೊಂಡು ದಾಳಿ ನಡೆಸಿತ್ತು.

ಕಳೆದ ಶನಿವಾರ ಇಸ್ರೇಲ್‌–ಅಮೆರಿಕ ನಡೆಸಿದ ಜಂಟಿ ದಾಳಿಯಲ್ಲಿ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದರು. ಉತ್ತರಾಧಿಕಾರಿಯಾಗಿ ಅವರ ಮಗ ಮೊಜತಬಾ ಖಮೇನಿ ಆಯ್ಕೆಯಾಗುವ ಸಾಧ್ಯತೆಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.