ADVERTISEMENT

ಗಾಜಾದ ಹೋಲಿ ಫ್ಯಾಮಿಲಿ ಚರ್ಚ್‌ ಮೇಲೆ ಇಸ್ರೇಲ್‌ ದಾಳಿ

ಏಜೆನ್ಸೀಸ್
Published 17 ಜುಲೈ 2025, 15:29 IST
Last Updated 17 ಜುಲೈ 2025, 15:29 IST
<div class="paragraphs"><p>ಹೋಲಿ ಫ್ಯಾಮಿಲಿ ಚರ್ಚ್‌ ಮೇಲೆ ಇಸ್ರೇಲ್‌ ದಾಳಿ</p></div>

ಹೋಲಿ ಫ್ಯಾಮಿಲಿ ಚರ್ಚ್‌ ಮೇಲೆ ಇಸ್ರೇಲ್‌ ದಾಳಿ

   

ರಾಯಿಟರ್ಸ್‌

ಡೀರ್‌ ಅಲ್‌–ಬಲಾಹ್‌ (ಗಾಜಾ ಪಟ್ಟಿ): ಗಾಜಾದಲ್ಲಿರುವ ಹೋಲಿ ಫ್ಯಾಮಿಲಿ ಚರ್ಚ್‌ ಮೇಲೆ ಗುರುವಾರ ಬೆಳಿಗ್ಗೆ ಇಸ್ರೇಲ್‌ ಶೆಲ್‌ ದಾಳಿ ನಡೆಸಿದೆ. ದಾಳಿಯಲ್ಲಿ ಚರ್ಚ್‌ನ ಪಾದ್ರಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

ADVERTISEMENT

ಇತ್ತೀಚೆಗೆ ಮೃತಪಟ್ಟ ಪೋಪ್‌ ಫ್ರಾನ್ಸಿಸ್‌ ಅವರಿಗೆ ಈ ಚರ್ಚ್‌ನ ಪಾದ್ರಿ, ಫಾದರ್‌ ಗೇಬ್ರಿಯಲ್‌ ರೊಮಾನಿ ಅವರು ಅತ್ಯಂತ ಆಪ್ತರಾಗಿದ್ದರು. ಗಾಜಾ ಮೇಲೆ ಇಸ್ರೇಲ್‌ ದಾಳಿ ನಡೆಸಲು ಆರಂಭಿಸಿದಾಗಿನಿಂದಲೂ ಫ್ರಾನ್ಸಿನ್‌ ಅವರು ಗೇಬ್ರಿಯಲ್‌ ಅವರಿಗೆ ಪದೇ ಪದೇ ಕರೆ ಮಾಡಿ, ಜನರ ಸ್ಥಿತಿಗತಿಗಳ ಕುರಿತು ಮಾಹಿತಿ ಪಡೆದುಕೊಳ್ಳುತ್ತಿದ್ದರು.

ದಾಳಿಯ ಬಗ್ಗೆ ಇಸ್ರೇಲ್‌ ಸೇನೆ ಈವರೆಗೂ ‍ಪ್ರತಿಕ್ರಿಯೆ ನೀಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.