ಟೆಲ್ ಅವಿವ್: ಇರಾನ್‌ನ ಪರಮಾಣು ಶಸ್ತ್ರಾಸ್ತ್ರಗಳ ಅಭಿವೃದ್ಧಿ ಕೇಂದ್ರ ಎನ್ನಲಾಗುವ ರಕ್ಷಣಾತ್ಮಕ ನಾವೀನ್ಯತೆ ಮತ್ತು ಸಂಶೋಧನಾ ಸಂಸ್ಥೆ ಸೇರಿದಂತೆ ವಿವಿಧ ಸೇನಾ ನೆಲೆಗಳ ಮೇಲೆ ರಾತ್ರಿ ಇಡೀ ದಾಳಿ ನಡೆಸಿರುವುದಾಗಿ ಇಸ್ರೇಲ್ ಸೇನೆ ಹೇಳಿಕೊಂಡಿದೆ.
ಇರಾನ್ ಹಾಗೂ ಇಸ್ರೇಲ್ ನಡುವೆ ಉಲ್ಬಣಿಸಿರುವ ಸಂಘರ್ಷ, ಎರಡನೇ ವಾರಕ್ಕೆ ಕಾಲಿಟ್ಟಿದೆ. ದಾಳಿ ಪ್ರತಿದಾಳಿಗಳು ತೀವ್ರಗೊಂಡಿವೆ.
ಇರಾನ್ ರಾಜಧಾನಿ ಟೆಹರಾನ್‌ನತ್ತ ರಾತ್ರಿಯಿಡೀ ನಡೆಸಿದ ದಾಳಿ ಮುಕ್ತಾಯವಾಗಿದೆ ಇಸ್ರೇಲ್ ಸೇನೆ ಮಾಹಿತಿ ನೀಡಿದೆ.
ಏತನ್ಮಧ್ಯೆ, ಟೆಲ್ ಅವಿವ್‌ನಲ್ಲಿರುವ ನಾರ್ವೆ ರಾಯಭಾರಿಯ ನಿವಾಸದ ಮೇಲೆ ಗ್ರೆನೇಡ್ ದಾಳಿ ನಡೆದಿದೆ. ಆದರೆ, ಯಾವುದೇ ಸಾವು–ನೋವು ಸಂಭವಿಸಿಲ್ಲ ಎಂದು ಇಸ್ರೇಲ್ ವಿದೇಶಾಂಗ ಸಚಿವ ಗಿಡಿಯಾನ್ ಸಾರ್ ತಿಳಿಸಿದ್ದಾರೆ.
ಇರಾನ್ ಪಡೆಗಳು ಗುರುವಾರ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಇಸ್ರೇಲ್‌ನ ದಕ್ಷಿಣ ಭಾಗದಲ್ಲಿರುವ ಪ್ರಮುಖ ಆಸ್ಪತ್ರೆಗೆ ಭಾರಿ ಹಾನಿಯಾಗಿದೆ. ಇದರ ಬೆನ್ನಲ್ಲೇ, ಇರಾನ್ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿಯನ್ನು ಹತ್ಯೆ ಮಾಡುವುದಾಗಿ ಇಸ್ರೇಲ್ ಗುಡುಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.