
ಪ್ರಾತಿನಿಧಿಕ ಚಿತ್ರ
ಬೈರೂತ್: ದಕ್ಷಿಣ ಲೆಬನಾನ್‌ನಲ್ಲಿರುವ ಪ್ಯಾಲೆಸ್ಟೀನ್ ಸಂತ್ರಸ್ತರ ಶಿಬಿರದ ಮೇಲೆ ಇಸ್ರೇಲ್ ಮಂಗಳವಾರ ನಡೆಸಿದ ವೈಮಾನಿಕ ದಾಳಿಯಲ್ಲಿ 13 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವರ್ಷದ ಹಿಂದೆ ಇಸ್ರೇಲ್–ಹಿಜ್ಬುಲ್ಲಾ ಯುದ್ಧದಲ್ಲಿ ಕದನ ವಿರಾಮ ಘೋಷಣೆಯಾದ ಬಳಿಕ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ.
ನಿರಾಶ್ರಿತರ ಶಿಬಿರದ ಬಳಿಯ ಮಸೀದಿಯ ವಾಹನ ನಿಲುಗಡೆ ಸ್ಥಳದಲ್ಲಿದ್ದ ಕಾರ್ ಮೇಲೆ ಡ್ರೋನ್ ದಾಳಿ ನಡೆದಿದೆ ಎಂದು ಸರ್ಕಾರಿ ಸ್ವಾಮ್ಯದ ನ್ಯಾಷನಲ್ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
‘ಇಸ್ರೇಲ್ ಮತ್ತು ಸೇನೆಯ ಮೇಲೆ ದಾಳಿ ನಡೆಸಲು ಸಿದ್ಧತೆ ನಡೆಸುತ್ತಿದ್ದ ಹಮಾಸ್ ತರಬೇತಿ ಸ್ಥಳದ ಮೇಲೆ ದಾಳಿ ಮಾಡಿದ್ದೇವೆ. ಹಮಾಸ್ ಗುಂಪುಗಳ ಎಲ್ಲೆಲ್ಲಿ ಕಾರ್ಯನಿರ್ವಹಿಸುತ್ತದೋ ಅಲ್ಲಿ ಇಸ್ರೇಲ್ ಕಾರ್ಯಾಚರಣೆ ನಡೆಸುತ್ತದೆ’ ಎಂದು ಇಸ್ರೇಲ್ ಸೇನೆ ಹೇಳಿದೆ.
ಕಳೆದ ಎರಡು ವರ್ಷಗಳಲ್ಲಿ ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಹಿಜ್ಬುಲ್ಲಾ ಸಂಘಟನೆಯ ಹಲವು ನಾಯಕರು ಮತ್ತು ಹಮಸ್‌ಗೆ ಸಂಬಂಧಿಸಿದವರು ಹತ್ಯೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.