ಟೆಲ್ ಅವಿವ್: ಇಸ್ರೇಲ್ ಜೊತೆಗಿನ ಕದನ ವಿರಾಮ ಉಲ್ಲಂಘನೆಗೆ ಇರಾನ್‌ಗೆ ಬಲವಾಗಿ ಪ್ರತಿಕ್ರಿಯಿಸುವಂತೆ ದೇಶದ ಸೇನೆಗೆ ಆದೇಶಿಸಿರುವುದಾಗಿ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಮಂಗಳವಾರ ಹೇಳಿದ್ದಾರೆ.
ಇರಾನ್‌ನಿಂದ ಇಸ್ರೇಲ್ ಕಡೆಗೆ ಕ್ಷಿಪಣಿ ಉಡಾವಣೆಯನ್ನು ಪತ್ತೆಹಚ್ಚಲಾಗಿದೆ ಎಂದು ಸೇನೆಯು ಪ್ರಕಟಿಸಿದ ನಂತರ ಈ ನಿರ್ದೇಶನ ನೀಡಲಾಯಿತು ಎಂದು ಅವರು ಹೇಳಿದ್ದಾರೆ.
ಇಸ್ರೇಲ್ ಮತ್ತು ಇರಾನ್ ಮಧ್ಯೆ ಕದನ ವಿರಾಮ ಜಾರಿಯಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದರು. ಯುದ್ಧ ವಿರಾಮ ಘೋಷಣೆಯ ಬೆನ್ನಲ್ಲೇ ಇರಾನ್ ಅದನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಇಸ್ರೇಲ್ ಮರು ಯುದ್ಧಕ್ಕೆ ಮುಂದಾಗಿದೆ.
ಟೆಹರಾನ್ ಮೇಲೆ ಹೆಚ್ಚಿನ ತೀವ್ರತೆಯ ಕಾರ್ಯಾಚರಣೆಗಳನ್ನು ನಡೆಸಲು ಸೇನೆಗೆ ಈಗ ಸೂಚನೆ ನೀಡಲಾಗಿದೆ ಎಂದು ಕಾಟ್ಜ್ ತಿಳಿಸಿದ್ದಾರೆ.
ಈ ಮಧ್ಯೆ ಇರಾನ್ ಮೇಲೆ ಬಾಂಬ್ ದಾಳಿ ನಡೆಸದಂತೆ ಇಸ್ರೇಲ್‌ಗೆ ತಮ್ಮ ಟ್ರುತ್ ಸೋಶಿಯಲ್ ಪೋಸ್ಟ್ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾಕೀತು ಮಾಡಿದ್ದಾರೆ.
ನೀವು ಈಗ ಇರಾನ್ ಮೇಲೆ ಬಾಂಬ್ ದಾಳಿ ನಡೆಸಿದರೆ, ಬಹುದೊಡ್ಡ ಯುದ್ಧ ವಿರಾಮ ಉಲ್ಲಂಘನೆಯಾಗಲಿದೆ. ನಿಮ್ಮ ವಿಮಾನಗಳನ್ನು ಹಿಂದಕ್ಕೆ ಕರೆಸಿಕೊಳ್ಳಿ ಎಂದು ಟ್ರಂಪ್ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.