ಗಾಜಾದಲ್ಲಿ ಇಸ್ರೇಲ್ ದಾಳಿ
–ರಾಯಿಟರ್ಸ್ ಚಿತ್ರ
ದಾರ್ ಅಲ್–ಬಲಾ (ಗಾಜಾ ಪಟ್ಟಿ): ಗಾಜಾದ ವಿವಿಧೆಡೆ ಇಸ್ರೇಲ್ ಸೇನೆಯು ಮಂಗಳವಾರ ನಡೆಸಿದ ದಾಳಿಯಲ್ಲಿ 40 ಪ್ಯಾಲೆಸ್ಟೀನಿಯನ್ನರು ಮೃತಪಟ್ಟಿದ್ದಾರೆ.
ಮಧ್ಯ ಗಾಜಾದಲ್ಲಿ ನೆರವು ಟ್ರಕ್‌ಗಳಿಂದ ಆಹಾರ ಪಡೆಯಲು ಕಾಯುತ್ತಿದ್ದ ನೂರಾರು ಜನರ ಮೇಲೆ ಇಸ್ರೇಲ್ ಪಡೆಗಳು ಮಂಗಳವಾರ ಮುಂಜಾನೆ ಗುಂಡಿನ ದಾಳಿ ನಡೆಸಿದ್ದು, ಕನಿಷ್ಠ 19 ಜನರು ಮೃತಪಟ್ಟಿದ್ದಾರೆ.
ಗಾಜಾವನ್ನು ಪೂರ್ವ– ಪಶ್ಚಿಮವಾಗಿ ವಿಭಜಿಸುವ ನೆಟ್ಜಾರಿಮ್ ಕಾರಿಡಾರ್‌ಗೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಜನರು ಗುಂಪಾಗಿ ಜಮಾಯಿಸಿದ್ದ ಸಂದರ್ಭ ಈ ದಾಳಿ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
‘ಇಸ್ರೇಲ್‌ನ ದಾಳಿಯಿಂದ 146 ಪ್ಯಾಲೆಸ್ಟೀನಿಯನ್ನರು ಗಾಯಗೊಂಡಿದ್ದಾರೆ. ಇದರಲ್ಲಿ 62 ಜನರ ಪರಿಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಧ್ಯ ಗಾಜಾದ ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ’ ಎಂದು ಅವ್ಡಾ ಆಸ್ಪತ್ರೆ ತಿಳಿಸಿದೆ.
ಸಬ್ರಾ ಎಂಬಲ್ಲಿ ಮನೆಯೊಂದರ ಮೇಲೆ ನಡೆದ ದಾಳಿಯಲ್ಲಿ 10 ಮಂದಿ ಹಾಗೂ, ಖಾನ್ ಯೂನಿಸ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 11 ಮಂದಿ ಮೃತಪಟ್ಟಿದ್ದಾರೆ.
‘ಇಸ್ರೇಲ್– ಹಮಾಸ್ ನಡುವಿನ ಸಂಘರ್ಷದಲ್ಲಿ ಇದುವರೆಗೂ ಮೃತಪಟ್ಟ ಪ್ಯಾಲೆಸ್ಟೀನಿಯನ್ನರ ಸಂಖ್ಯೆ 56 ಸಾವಿರಕ್ಕೆ ತಲುಪಿದೆ’ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.