ADVERTISEMENT

ಇಸ್ರೇಲ್‌ನಲ್ಲಿ ಪ್ರಧಾನಿ ವಿರುದ್ಧ ಮತ್ತೆ ಪ್ರತಿಭಟನೆ: ಜಲಫಿರಂಗಿ ಪ್ರಯೋಗ

ಏಜೆನ್ಸೀಸ್
Published 31 ಜನವರಿ 2021, 6:13 IST
Last Updated 31 ಜನವರಿ 2021, 6:13 IST
ಪ್ರಧಾನಿ ಬೆಂಜಮಿನ್‌ ನೆತನ್ಯಾಹು ರಾಜೀನಾಮೆ ಆಗ್ರಹಿಸಿ ಪ್ರತಿಭಟನೆ
ಪ್ರಧಾನಿ ಬೆಂಜಮಿನ್‌ ನೆತನ್ಯಾಹು ರಾಜೀನಾಮೆ ಆಗ್ರಹಿಸಿ ಪ್ರತಿಭಟನೆ   

ಜೆರುಸಲೇಂ: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನಕಾರರು ಶನಿವಾರ ರಸ್ತೆಗಿಳಿದಿದ್ದರು. ಈ ವೇಳೆ ಅವರನ್ನು ಚದುರಿಸಲು ಇಸ್ರೇಲ್‌ ಪೊಲೀಸರು ಜಲ ಫಿರಂಗಿಯನ್ನು ಪ್ರಯೋಗಿಸಿದ್ದಾರೆ.

ಕಳೆದ ಏಳು ತಿಂಗಳಿನಿಂದ ಪ್ರತಿ ವಾರ ಜೆರುಸಲೇಂನಲ್ಲಿರುವ ಪ್ರಧಾನಿ ನೆತನ್ಯಾಹು ಅವರ ಅಧಿಕೃತ ನಿವಾಸದ ಮುಂದೆ ಪ್ರತಿಭಟನಕಾರರು ಸೇರುತ್ತಿದ್ದಾರೆ. ಆದರೆ ಪೊಲೀಸರು ಈವರೆಗೆ ಜಲ ಫಿರಂಗಿ ಪ್ರಯೋಗ ಮಾಡಿರಲಿಲ್ಲ.

‘ನೂರಾರು ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಕೆಲವು ಪ್ರತಿಭಟನಕಾರರು ಅಶಿಸ್ತಿನಿಂದ ವರ್ತಿಸಿದ್ದಾರೆ. ಅಲ್ಲದೆ ಪೊಲೀಸ್‌ ಬ್ಯಾರಿಕೇಡರ್‌ಗಳನ್ನು ದಾಟಿ ಒಳ ನುಗ್ಗಲು ಪ್ರಯತ್ನಿಸುತ್ತಿದ್ದರು. ಅಧಿಕಾರಿಗಳ ಮೇಲೆ ಸಿಕ್ಕ ಸಿಕ್ಕ ವಸ್ತುಗಳನ್ನು ಎಸೆಯುತ್ತಿದ್ದರು. ಈ ನಡುವೆ ಕೆಲವು ಅಧಿಕಾರಿಗಳಿಗೆ ಸಣ್ಣ–ಪುಟ್ಟ ಗಾಯಗಳಾಗಿವೆ. ಹಲವು ಪ್ರತಿಭಟನಕಾರರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ADVERTISEMENT

‘ಭ್ರಷ್ಟಚಾರ, ವಂಚನೆಯ ಆರೋಪ ಎದುರಿಸುತ್ತಿರುವ ನೆತನ್ಯಾಹು, ಪ್ರಧಾನಿಯಾಗಿ ಮುಂದುವರಿಯಲು ಸಾಧ್ಯವಿಲ್ಲ ’ಎಂದು ಪ್ರತಿಭಟನಕಾರರು ಹೇಳಿದ್ದಾರೆ.

‘ನೆತನ್ಯಾಹು ಸರ್ಕಾರಕ್ಕೆ ಸರಣಿ ಲಾಕ್‌ಡೌನ್‌ ಬಳಿಕವೂ ಕೊರೊನಾ ಸೋಂಕನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ. ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸುವಲ್ಲಿಯೂ ಸರ್ಕಾರ ವಿಫಲವಾಗಿದೆ’ ಎಂದು ಪ್ರತಿಭಟನಕಾರರು ದೂರಿದ್ದಾರೆ.

ಇಸ್ರೇಲ್‌ನಲ್ಲಿ ಮಾರ್ಚ್‌ 23ರಂದು ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.