ADVERTISEMENT

ಇಸ್ರೇಲ್‌ ಪ್ರಧಾನಿ ನೆತನ್ಯಾಹು ರಾಜೀನಾಮೆ ಆಗ್ರಹಿಸಿ ಮುಂದುವರಿದ ಪ್ರತಿಭಟನೆ

ಏಜೆನ್ಸೀಸ್
Published 7 ಫೆಬ್ರುವರಿ 2021, 7:42 IST
Last Updated 7 ಫೆಬ್ರುವರಿ 2021, 7:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜೆರುಸಲೇಂ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ನೂರಾರು ಜನರು ಅವರ ಅಧಿಕೃತ ನಿವಾಸದ ಮುಂದೆ ಶನಿವಾರ ರಾತ್ರಿ ಪ್ರತಿಭಟನೆ ನಡೆಸಿದರು.

ಕಳೆದ ಏಳು ತಿಂಗಳಿನಿಂದ ಪ್ರತಿ ವಾರ ಪ್ರತಿಭಟನಕಾರರು ಕೇಂದ್ರ ಜೆರುಸಲೇಂನಲ್ಲಿ ಜಮಾಯಿಸುತ್ತಿದ್ದಾರೆ.

‘ಭ್ರಷ್ಟಾಚಾರ ಹಾಗೂ ಕೋವಿಡ್‌ ಪ್ರಸರಣ ನಿಯಂತ್ರಿಸುವಲ್ಲಿ ವೈಫಲ್ಯದ ಆರೋಪ ಎದುರಿಸುತ್ತಿರುವ ನೆತನ್ಯಾಹು, ಪ್ರಧಾನಿಯಾಗಿ ಮುಂದುವರಿಯಲು ಸಾಧ್ಯವಿಲ್ಲ. ಹಾಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದ್ದಾರೆ.

ADVERTISEMENT

‘ನೆತನ್ಯಾಹು ಅವರು ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಭ್ರಷ್ಟಚಾರದ ಆರೋಪ ಎದುರಿಸುತ್ತಿದ್ದಾರೆ. ಹೀಗಿರುವಾಗ ಅವರು ನಮ್ಮ ದೇಶವನ್ನು ಮುನ್ನಡೆಸಲು ಸಾಧ್ಯವಿಲ್ಲ. ಅಲ್ಲದೆ ಕೊರೊನಾ ಸೋಂಕು ನಿಯಂತ್ರಿಸಲು ಹೇರಲಾದ ಸರಣಿ ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ಮತ್ತು ನಿರುದ್ಯೋಗ ಸಮಸ್ಯೆಗಳು ಕೂಡ ಹೆಚ್ಚಾಗಿವೆ’ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಬೆಂಜಮಿನ್‌ ನೆತನ್ಯಾಹು ವಿರುದ್ಧದ ಭ್ರಷ್ಟಚಾರ ಪ್ರಕರಣದ ವಿಚಾರಣೆಯು ಈ ವಾರ ಪುನರಾರಂಭಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.