ಇಸ್ರೇಲ್ ಸೇನೆು ಗಾಜಾಪಟ್ಟಿ ಮೇಲೆ ದಾಳಿ ನಡೆಸಿದೆ
–ರಾಯಿಟರ್ಸ್ ಚಿತ್ರ
ಜೆರುಸಲೇಂ: ಗಾಜಾ ನಗರದ ಮೇಲೆ ಇಸ್ರೇಲ್‌ನ ವಾಯುಪಡೆ ರಾತ್ರೋರಾತ್ರಿ ನಡೆಸಿದ ವೈಮಾನಿಕ ದಾಳಿಯಲ್ಲಿ 58 ಮಂದಿ ಪ್ಯಾಲೆಸ್ಟೀನಿಯರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಆಡಳಿತಾಧಿಕಾರಿಗಳು ಶನಿವಾರ ಹೇಳಿದ್ದಾರೆ.
ಇಸ್ರೇಲ್ ಹಾಗೂ ಹಮಾಸ್ ನಡುವಿನ ಸಂಘರ್ಷವನ್ನು ಶಮನಗೊಳಿಸಲು ನಡೆಯುತ್ತಿರುವ ಮಾತುಕತೆಯಲ್ಲಿ ಯಾವುದೇ ಪ್ರಗತಿ ಕಾಣದೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಧ್ಯಪ್ರಾಚ್ಯ ಪ್ರವಾಸವನ್ನು ಕೊನೆಗೊಳಿಸಿದ ಬೆನ್ನಲ್ಲೇ ಈ ದಾಳಿ ನಡೆದಿದೆ.
ವೈಮಾನಿಕ ದಾಳಿ ಕುರಿತಂತೆ ಉತ್ತರ ಗಾಜಾದ ಇಂಡೋನೇಷ್ಯನ್ ಆಸ್ಪತ್ರೆಯ ನಿರ್ದೇಶಕ ಮರ್ವಾನ್ ಅಲ್ ಸುಲ್ತಾನ್ ಮಾಹಿತಿ ನೀಡಿದ್ದು, ಮಧ್ಯರಾತ್ರಿಯೇ 58 ಶವಗಳನ್ನು ಆಸ್ಪತ್ರೆಗೆ ತರಲಾಗಿದೆ. ಇನ್ನೂ ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ. ಇಲ್ಲಿನ ಪರಿಸ್ಥಿತಿ ಭೀಕರವಾಗಿದೆ ಎಂದು ಹೇಳಿದ್ದಾರೆ.
ಗಾಜಾದ ಮೇಲೆ ಗುರುವಾರದಿಂದ ಇಸ್ರೇಲ್ ನಡೆಸಿರುವ ದಾಳಿಯಲ್ಲಿ 300ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಸ್ರೇಲ್ ಮೇಲೆ ಒತ್ತಡ (ರೋಮ್ ವರದಿ): ಗಾಜಾ ಮೇಲಿನ ದಾಳಿ ನಿಲ್ಲಿಸುವಂತೆ ಇಸ್ರೇಲ್ ಮೇಲೆ ಒತ್ತಡ ಹೇರುವಂತೆ ಇಟಲಿ ಮತ್ತು ಸ್ಪೇನ್ ಆಗ್ರಹಿಸಿವೆ.
‘ಗಾಜಾದ ಜನರು ಇನ್ನಷ್ಟು ಸಂಕಷ್ಟ ಅನುಭವಿಸುವುದನ್ನು ನೋಡಲು ಬಯಸುವುದಿಲ್ಲ’ ಎಂದು ಇಟಲಿ ವಿದೇಶಾಂಗ ಸಚಿವ ಆಂಟೊನಿಯೊ ತಜಾನಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.