ಗಾಜಾದಲ್ಲಿ ಇಸ್ರೇಲ್ ದಾಳಿ
ಟೆಲ್ ಅವಿವ್/ಗಾಜಾಪಟ್ಟಿ: ಗಾಜಾದ ವಿವಿಧ ಪ್ರದೇಶಗಳು ಸೇರಿದಂತೆ ಖಾನ್ ಯೂನಿಸ್ ಮೇಲೆ ಇಸ್ರೇಲ್ ಪಡೆಗಳು ನಡೆಸಿದ ದಾಳಿಯಿಂದಾಗಿ 25 ಪ್ಯಾಲೆಸ್ಟೀನಿಯರು ಮೃತಪಟ್ಟಿದ್ದು, 77 ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಇಸ್ರೇಲ್ ಪಡೆಗಳು ದಕ್ಷಿಣ ಲೆಬನಾನ್‌ನಲ್ಲಿರುವ ಪ್ಯಾಲೆಸ್ಟೀನ್ ನಿರಾಶ್ರಿತರ ಶಿಬಿರದ ಮೇಲೆ ವಾಯು ದಾಳಿ ನಡೆಸಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಮೆರಿಕ ಮಧ್ಯಸ್ಥಿಕೆಯ ಕದನ ವಿರಾಮವನ್ನು ಉಲ್ಲಂಘಿಸಿ ಇಸ್ರೇಲ್ ಗಾಜಾದ ಮೇಲೆ ಈವರೆಗೆ 393 ಬಾರಿ ದಾಳಿ ನಡೆಸಿದೆ. ಇದರಿಂದಾಗಿ 280 ಮಂದಿ ಸಾವಿಗೀಡಾಗಿದ್ದು, 672 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಕಳೆದ ತಿಂಗಳು ಇಸ್ರೇಲ್ ರಕ್ಷಣಾ ಪಡೆಗಳು ಗಾಜಾದ ಹಲವೆಡೆ ನಡೆಸಿದ ದಾಳಿಯಲ್ಲಿ 9 ಮಂದಿ ಕೊನೆಯುಸಿರೆಳೆದಿದ್ದರು. ಈ ಮೂಲಕ ಅಮೆರಿಕ ಮಧ್ಯಸ್ಥಿಕೆಯ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಸಿಎನ್‌ಎನ್ ವರದಿ ಮಾಡಿದೆ.
ಗಾಜಾದ ಮೇಲೆ ತಕ್ಷಣವೇ ದಾಳಿ ನಡೆಸುವಂತೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಸೇನೆಗೆ ಸೂಚನೆ ನೀಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಗಾಜಾದ ಮೇಲೆ ದಾಳಿ ನಡೆಸುವ ಸಂಬಂಧ ಅಮೆರಿಕಕ್ಕೆ ಇಸ್ರೇಲ್ ಮಾಹಿತಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.