ADVERTISEMENT

ಗಾಜಾಪಟ್ಟಿ ಮೇಲೆ ಇಸ್ರೇಲ್ ದಾಳಿ: 90ಕ್ಕೂ ಹೆಚ್ಚು ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2025, 14:58 IST
Last Updated 19 ಏಪ್ರಿಲ್ 2025, 14:58 IST
–
   

ದೀರ್ ಅಲ್–ಬಲಾಹ್: ಗಾಜಾಪಟ್ಟಿ ಮೇಲೆ ಇಸ್ರೇಲ್ ‍ಪಡೆಗಳು ಕಳೆದ 48 ಗಂಟೆಗಳಲ್ಲಿ ನಡೆಸಿದ ದಾಳಿಯಲ್ಲಿ 90ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ. 

ಆದರೆ, ಇದರಲ್ಲಿ ಎಷ್ಟು ಮಂದಿ ನಾಗರಿಕರು ಮತ್ತು ಸೈನಿಕರು ಎಂಬ ವಿವರವನ್ನು ಸಚಿವಾಲಯ ಬಹಿರಂಗಪಡಿಸಿಲ್ಲ. ಮಾನವೀಯ ವಲಯ ಎಂದು ಗುರುತಿಸಿದ ಸ್ಥಳದಲ್ಲಿ ಆಶ್ರಯ ಪಡೆದಿದ್ದ ಮಕ್ಕಳು, ಮಹಿಳೆಯರು ಸೇರಿದಂತೆ 15 ಮಂದಿ ಒಂದೇ ರಾತ್ರಿ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ. 

ಒತ್ತೆಯಾಳಾಗಿ ಇಟ್ಟುಕೊಂಡಿರುವ ಇಸ್ರೇಲ್ ಪ್ರಜೆಗಳನ್ನು ಬಿಡಿಸಿಕೊಳ್ಳುವುದು ಮತ್ತು ಬಂಡುಕೋರರು ಶಸ್ತ್ರ ತ್ಯಜಿಸುವಂತೆ ಹಮಾಸ್ ಮೇಲೆ ಒತ್ತಡ ಹೇರುವ ಭಾಗವಾಗಿ ಇಸ್ರೇಲ್, ಗಾಜಾಪಟ್ಟಿ ಮೇಲಿನ ದಾಳಿಯನ್ನು ತೀವ್ರಗೊಳಿಸಿದೆ.  

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.