ADVERTISEMENT

ಶ್ರೀಲಂಕಾ ಪ್ರತಿಭಟನಾಕಾರರ ಕುಂದುಕೊರತೆಗಳನ್ನು ಪರಿಹರಿಸುವುದು ಮುಖ್ಯ:ವಿಶ್ವಸಂಸ್ಥೆ

​ಪ್ರಜಾವಾಣಿ ವಾರ್ತೆ
Published 14 ಜುಲೈ 2022, 4:09 IST
Last Updated 14 ಜುಲೈ 2022, 4:09 IST
   

ವಿಶ್ವಸಂಸ್ಥೆ: ಶ್ರೀಲಂಕಾದಲ್ಲಿ ಸಂಘರ್ಷದ ಮೂಲ ಕಾರಣಗಳು ಮತ್ತು ಪ್ರತಿಭಟನಾಕಾರರ ಕುಂದುಕೊರತೆಗಳನ್ನು ಪರಿಹರಿಸುವುದು ಮುಖ್ಯವಾಗಿದೆ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಹೇಳಿದ್ದಾರೆ.

ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ಸ್ಥಿತ್ಯಂತರಕ್ಕಾಗಿ ರಾಜಿ ಮನೋಭಾವವನ್ನು ಅಳವಡಿಸಿಕೊಳ್ಳುವಂತೆ ನಾನು ಎಲ್ಲಾ ಪಕ್ಷದ ನಾಯಕರನ್ನು ಕೋರುತ್ತೇನೆ ಎಂದು ಅವರು ಹೇಳಿದ್ದಾರೆ. ಶ್ರೀಲಂಕಾ ಪರಿಸ್ಥಿತಿ ಬಗ್ಗೆ ನಿತ್ಯ ಅವಲೋಕನ ಮಾಡುವುದಾಗಿಯೂ ಟ್ವೀಟ್ ಮಾಡಿದ್ದಾರೆ.

ಸದ್ಯ, ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿದ್ದು, ಅಧ್ಯಕ್ಷ ಗೊಟಬಯ ರಾಜಪಕ್ಸ ಮಾಲ್ಡೀವ್ಸ್ ಮೂಲಕ ಸಿಂಗಪುರಕ್ಕೆ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ADVERTISEMENT

ಹಂಗಾಮಿ ಅಧ್ಯಕ್ಷ ಮತ್ತು ಪ್ರಧಾನಿ ರಾನಿಲ್ ವಿಕ್ರಮ ಸಿಂಘೆ ಪದಚ್ಯುತಿಗೂ ಒತ್ತಡ ಹೆಚ್ಚಾಗುತ್ತಿದೆ. ಈ ಮಧ್ಯೆ, ಆಡಳಿತ ಮತ್ತು ವಿಪಕ್ಷಗಳು ಒಪ್ಪುವ ವ್ಯಕ್ತಿಯನ್ನು ಪ್ರಧಾನಿ ಹುದ್ದೆಗೆ ನಾಮನಿರ್ದೇಶನ ಮಾಡುವಂತೆ ಸ್ಪೀಕರ್‌ಗೆ ರಾನಿಲ್ ಸೂಚನೆ ನೀಡಿದ್ದಾರೆ.

ಗೊಟಬಯ ದೇಶ ಬಿಟ್ಟು ತೆರಳಿರುವ ಸೂಚನೆ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರ ಆಕ್ರೋಶ ಹೆಚ್ಚಾಗಿದ್ದು, ಹೋರಾಟ ಮತ್ತಷ್ಟು ತೀವ್ರಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.