ಅಪಘಾತ
–ಪ್ರಾತಿನಿಧಿಕ ಚಿತ್ರ
ಲಂಡನ್: ಶುಕ್ರವಾರ ಬೆಳಗ್ಗೆ ಇಟಲಿಯ ಗ್ರಾಸೆಟೋದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಭಾರತೀಯರು ಸೇರಿದಂತೆ ಮೂವರು ಸಾವಿಗೀಡಾಗಿದ್ದಾರೆ.
ಏಷ್ಯಾ ಮೂಲದ ಪ್ರವಾಸಿಗರಿದ್ದ ಮಿನಿ ಬಸ್ ಮತ್ತು ವ್ಯಾನ್ ನಡುವೆ ಡಿಕ್ಕಿ ಉಂಟಾಗಿ, ಮೂವರು ಮೃತಪಟ್ಟಿದ್ದಾರೆ. ಮಕ್ಕಳು ಸೇರಿ ಐವರು ಗಾಯಗೊಂಡಿದ್ದಾರೆ ಎಂದು ಇಟಲಿಯ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
ಘಟನೆಯಲ್ಲಿ ನಾಗ್ಪುರ ಮೂಲದ ಇಬ್ಬರು ಸಾವಿಗೀಡಾಗಿದ್ದಾರೆ. ಗಾಯಾಳುಗಳ ಕುಟುಂಬ ಮತ್ತು ಸ್ಥಳೀಯ ಅಧಿಕಾರಿಗಳನ್ನು ಸಂಪರ್ಕಿಸಿದ್ದು, ಎಲ್ಲ ನೆರವು ನೀಡಲಾಗಿದೆ ಎಂದು ಇಟಲಿಯಲ್ಲಿರುವ ಭಾರತೀಯ ರಾಯಭಾರ ಕಚೇರಿ, ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.