ADVERTISEMENT

ಬಾಂಗ್ಲಾದೇಶಕ್ಕೆ ಜೈಶಂಕರ್‌ ಭೇಟಿ

ಪಿಟಿಐ
Published 28 ಏಪ್ರಿಲ್ 2022, 12:23 IST
Last Updated 28 ಏಪ್ರಿಲ್ 2022, 12:23 IST
ಎಸ್‌.ಜೈಶಂಕರ್‌
ಎಸ್‌.ಜೈಶಂಕರ್‌   

ಢಾಕಾ: ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸೀನಾ ಅವರೊಂದಿಗೆ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಮಾತುಕತೆ ನಡೆಸಲು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರು ಗುರುವಾರ ಬಾಂಗ್ಲಾದೇಶಕ್ಕೆ ಭೇಟಿ ನೀಡಿದ್ದರು.

ಪ್ರಧಾನಿ ಹಸೀನಾ ಅವರು ಭಾರತಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಜೈಶಂಕರ್‌ ಇಲ್ಲಿಗೆ ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ನವದೆಹಲಿಯಲ್ಲಿ ನಡೆಯಲಿರುವ 7ನೇ ಭಾರತ –ಬಾಂಗ್ಲಾದೇಶ ಜಂಟಿ ಸಮಾಲೋಚನಾ ಸಭೆಗೆ ಉಭಯ ದೇಶಗಳು ದಿನಾಂಕ ನಿಗದಿ ಪಡಿಸುವ ನಿರೀಕ್ಷೆ ಇದೆ. ಭೇಟಿಯ ವೇಳೆ ಜೈಶಂಕರ್‌ ಅವರು ಪ್ರಧಾನಿ ನರೇಂದ್ರ ಮೋದಿ ಪರವಾಗಿ ಹಸೀನಾ ಅವರನ್ನು ಸಭೆಗೆ ಆಹ್ವಾನಿಸಿದರು ಎಂದು ಗೊತ್ತಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.