
ಕ್ವಾಲಾಲಂಪುರ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರೊಂದಿಗೆ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಸೋಮವಾರ ಮಾತುಕತೆ ನಡೆಸಿದರು. ಇಬ್ಬರೂ ನಾಯಕರು ಆಸಿಯಾನ್ ಶೃಂಗಸಭೆಯಲ್ಲಿ ಭಾಗವಹಿಸಲು ಇಲ್ಲಿಗೆ ಆಗಮಿಸಿದ್ದರು.
ಭಾರತದ ವಸ್ತುಗಳ ಮೇಲೆ ಅಮೆರಿಕವು ಸುಂಕ ವಿಧಿಸಿದ ಬಳಿಕ ಎರಡೂ ದೇಶಗಳ ಸಂಬಂಧ ಹಳಸಿತ್ತು. ಹಳಸಿದ ಸಂಬಂಧವನ್ನು ಸರಿಪಡಿಸಿಕೊಳ್ಳುವ ಯತ್ನ ನಡೆಯುತ್ತಿದೆ. ‘ಅಮೆರಿಕದ ರುಬಿಯೊ ಅವರನ್ನು ಭೇಟಿಯಾಗಿ ಸಂತೋಷವಾಯಿತು. ನಮ್ಮ ದ್ವಿಪಕ್ಷೀಯ ಸಂಬಂಧ ಮತ್ತು ಜಗತ್ತಿನ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು’ ಎಂದು ಜೈಶಂಕರ್ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಇದೇ ವೇಳೆ ಸಚಿವ ಜೈಶಂಕರ್ ಅವರು ಆಸ್ಟ್ರೇಲಿಯಾ ಪ್ರಧಾನಿ ಆಂಥೊನಿ ಅಲ್ಬನೀಸ್, ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್, ಜಪಾನ್‌ನ ವಿದೇಶಾಂಗ ಸಚಿವ ಮೊಟೆಗಿ ತೊಷಿಮಿತ್ಸು ಮತ್ತು ಮಲೇಷ್ಯಾದ ವಿದೇಶಾಂಗ ಸಚಿವ ಮೊಹಮ್ಮದ್ ಹಾಜಿ ಹಸನ್ ಅವರನ್ನು ಭೇಟಿಯಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.