ADVERTISEMENT

Japan Earthquake: ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ; ಹಲವರಿಗೆ ಗಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಡಿಸೆಂಬರ್ 2025, 5:29 IST
Last Updated 9 ಡಿಸೆಂಬರ್ 2025, 5:29 IST
<div class="paragraphs"><p>ಭೂಕಂಪ</p></div>

ಭೂಕಂಪ

   

ಟೋಕಿಯೊ: ಉತ್ತರ ಜಪಾನ್‌ನಲ್ಲಿ ಸೋಮವಾರ ತಡರಾತ್ರಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಇದರ ಬೆನ್ನಲ್ಲೇ ಪೆಸಿಫಿಕ್ ಕರಾವಳಿ ಪ್ರದೇಶಗಳಲ್ಲಿ ಸುನಾಮಿ ಎಲೆಗಳು ಎದ್ದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಪಾನ್‌ನ ಪ್ರಮುಖ ಹೊನ್ಶು ದ್ವೀಪದ ಉತ್ತರಕ್ಕೆ ಅಮೋರಿ ಕರಾವಳಿಯಿಂದ ಸುಮಾರು 80 ಕಿ.ಮೀ. ದೂರದಲ್ಲಿರುವ ಪೆಸಿಫಿಕ್ ಮಹಾಸಾಗರದಲ್ಲಿ ಕಂಪನ ಉಂಟಾಗಿದೆ. ಈ ಭೂಕಂಪದಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ADVERTISEMENT

ಅಮೋರಿಯ ದಕ್ಷಿಣಕ್ಕೆ ಇವಾಟೆ ಪ್ರಾಂತ್ಯದ ಕುಜಿ ಬಂದರಿನಲ್ಲಿ 70 ಸೆಂ.ಮೀ. ಎತ್ತರಕ್ಕೆ ಸುನಾನಿ ಅಲೆಗಳು ಎದ್ದಿವೆ. ಅಲ್ಲಿನ ಕರಾವಳಿ ಪ್ರದೇಶಗಳಲ್ಲಿ ಸುನಾಮಿ ಅಲೆಗಳು ಅಪ್ಪಳಿಸಿದವು ಎಂದು ಜಪಾನ್ ಹವಾಮಾನ ಸಂಸ್ಥೆ ತಿಳಿಸಿದೆ.

ಭೂಕಂಪದಲ್ಲಿ ಉಂಟಾಗಿರುವ ಹಾನಿಯ ಪ್ರಮಾಣದ ಕುರಿತು ಜಪಾನ್ ಸರ್ಕಾರವು ಅವಲೋಕನ ನಡೆಸುತ್ತಿದೆ. ಹಲವೆಡೆ ರಸ್ತೆ, ಕಟ್ಟಡಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.

'ಜನರ ಪ್ರಾಣ ಉಳಿಸಲು ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ. ನಮ್ಮಿಂದ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದ್ದೇವೆ' ಎಂದು ಜಪಾನ್ ಪ್ರಧಾನಿ ಸನೆ ತಾಕೈಚಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸುಮಾರು 480 ಮಂದಿಯನ್ನು ಹಚಿನೊ ವಾಯುನೆಲೆಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಇಲಾಖೆಯು ರಕ್ಷಣಾ ಕಾರ್ಯಾಚರಣೆಗೆ ನೇತೃತ್ವ ವಹಿಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.