ADVERTISEMENT

ಜೈಷೆ ಮುಖಂಡ ಮಸೂದ್ ಅಜರ್ ನಮ್ಮಲ್ಲಿಯೇ ಇದ್ದಾನೆ ಎಂದು ಒಪ್ಪಿಕೊಂಡ ಪಾಕಿಸ್ತಾನ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2019, 5:13 IST
Last Updated 1 ಮಾರ್ಚ್ 2019, 5:13 IST
   

ನವದೆಹಲಿ: ಜೈಷ್- ಎ- ಮೊಹಮ್ಮದ್ ಉಗ್ರ ಸಂಘಟನೆಯ ಮುಖಂಡ ಮಸೂದ್ ಅಜರ್ ನಮ್ಮ ಬಳಿ ಇದ್ದಾನೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಹಮೂದ್ಖುರೇಷಿ ಹೇಳಿದ್ದಾರೆ.ಆದರೆ ಮಸೂದ್ ಅಜರ್ ಆರೋಗ್ಯ ಸರಿ ಇಲ್ಲ, ಆತ ಮನೆಯಿಂದ ಹೊರಗೆ ಹೋಗುವ ಸ್ಥಿತಿಯಲ್ಲಿ ಇಲ್ಲ ಎಂದಿದ್ದಾರೆ ಸಚಿವರು.

ಮಸೂದ್ ಅಜರ್‌ನ್ನು ಭಾರತಕ್ಕೆ ಹಸ್ತಾಂತರಿಸುವಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದಖುರೇಷಿ, ಭಾರತ ಆತನ ಬಗ್ಗೆ ಸಾಕ್ಷ್ಯಗಳನ್ನು ನೀಡಬೇಕು.ಆತನ ಮೇಲಿರುವ ಆರೋಪ ಪಾಕಿಸ್ತಾನದ ನ್ಯಾಯಾಲಯದಲ್ಲಿ ಸಾಬೀತಾಗಬೇಕಿದೆ ಎಂದು ಹೇಳಿದ್ದಾರೆ.

ಪುಲ್ವಾಮ ಆತ್ಮಾಹುತಿ ದಾಳಿಯಲ್ಲಿ ಪಾಕಿಸ್ತಾದ ಜೈಷ್-ಎ- ಮೊಹಮ್ಮದ್ ಉಗ್ರ ಸಂಘಟನೆಯ ಕೈವಾಡ ಇದೆ ಎಂದು ಆರೋಪಿಸಿದ್ದ ಭಾರತ, ಈ ಬಗ್ಗೆ ದಾಖಲೆಗಳನ್ನು ಪಾಕಿಸ್ತಾನಕ್ಕೆ ಬುಧವಾರಹಸ್ತಾಂತರಿಸಿತ್ತು. ಅಜರ್‌ನ್ನು ಜಾಗತಿಕ ಉಗ್ರ ಎಂದು ಘೋಷಿಸಬೇಕು ಎಂದು ಭಾರತ ಸೇರಿದಂತೆ ಹಲವಾರು ರಾಷ್ಟ್ರಗಳು ವಿಶ್ವಸಂಸ್ಥೆಗೆ ಒತ್ತಾಯಿಸಿವೆ.

ADVERTISEMENT

ನಿಮ್ಮಬಳಿ ಸಾಕ್ಷ್ಯಗಳಿದ್ದರೆ ಬಂದು ಮಾತನಾಡೋಣ, ಈ ವಿಷಯದ ಬಗ್ಗೆ ರಾಜತಾಂತ್ರಿಕ ಮಾತುಕತೆ ನಡೆಸೋಣ ಎಂದು ಖುರೇಷಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.