ADVERTISEMENT

ಬ್ರೆಕ್ಸಿಟ್‌: ಹೊಸ ಒಪ್ಪಂದಕ್ಕೆ ಐರೋಪ್ಯ ಒಕ್ಕೂಟ ಬೆಂಬಲ

ಹೊಸ ಒಪ್ಪಂದಕ್ಕೆ ಐರೋಪ್ಯ ಒಕ್ಕೂಟದ ಬೆಂಬಲ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2019, 19:34 IST
Last Updated 18 ಅಕ್ಟೋಬರ್ 2019, 19:34 IST
   

ಲಂಡನ್‌: ಹೊಸ ಬ್ರೆಕ್ಸಿಟ್ ಒಪ್ಪಂದಕ್ಕೆ ಐರೋಪ್ಯ ಒಕ್ಕೂಟದ ನಾಯಕರಿಂದ ಬೆಂಬಲ ಪಡೆದ ಬಳಿಕ, ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್‌ ಶುಕ್ರವಾರ ಬ್ರಿಟನ್ ಸಂಸತ್ತಿನಲ್ಲಿ ಅದಕ್ಕೆ ಬೇಕಾದ ಬೆಂಬಲದ ನಿರೀಕ್ಷೆಯಲ್ಲಿದ್ದಾರೆ.

ಬ್ರುಸೆಲ್ಸ್‌ನ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದ ಬೋರಿಸ್ ಜಾನ್ಸನ್, ಶನಿವಾರ ಬ್ರಿಟನ್ ಸಂಸತ್ತಿನಲ್ಲಿ ಬ್ರೆಕ್ಸಿಟ್‌ ಪರ ಶಾಸಕರ ಬೆಂಬಲ ಪಡೆಯುವ ಆಶಾಭಾವ ಹೊಂದಿದ್ದಾರೆ.

ಒಟ್ಟು 650 ಸ್ಥಾನಗಳ ಹೌಸ್ ಆಫ್ ಕಾಮನ್ಸ್‌ನಲ್ಲಿ ಬೋರಿಸ್ ಜಾನ್ಸನ್ ಅವರ ಪಕ್ಷಕ್ಕೆ ಬಹುಮತವಿಲ್ಲ. ಆದ್ದರಿಂದ ಅವರು ಇತರ ಪಕ್ಷಗಳು ಮತ್ತು ಸ್ವತಂತ್ರ ಶಾಸಕರ ಬೆಂಬಲವನ್ನು ಅವಲಂಬಿಸಬೇಕಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.