

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನ ಶಹರ್-ಎ-ನಾವ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದ್ದು, ಅನೇಕರು ಸಾವಿಗೀಡಾಗಿದ್ದಾರೆ ಎಂದು ತಾಲಿಬಾನ್ ಆಂತರಿಕ ಸಚಿವಾಲಯ ಸೋಮವಾರ ತಿಳಿಸಿದೆ.
’ಪ್ರಾಥಮಿಕ ವರದಿಗಳ ಪ್ರಕಾರ, ಹಲವರು ಸಾವಿಗೀಡಾಗಿದ್ದಾರೆ ಹಾಗೂ ಅನೇಕರು ಗಾಯಗೊಂಡಿದ್ದಾರೆ’ ಎಂದು ಆಂತರಿಕ ಸಚಿವಾಲಯದ ವಕ್ತಾರ ಅಬ್ದುಲ್ ಮತೀನ್ ಖಾನಿ ಮಾಹಿತಿ ನೀಡಿದ್ದಾರೆ. ಸತ್ತವರ ಹಾಗೂ ಗಾಯಾಳುಗಳ ವಿವರಗಳು ಇನ್ನಷ್ಟೇ ಬಿಡುಗಡೆಯಾಗಬೇಕಿದೆ.
ಶಹರ್-ಎ-ನೌ ಪ್ರದೇಶದಲ್ಲಿ ಹೆಚ್ಚಾಗಿ ವಿದೇಶಿಗರು ನೆಲೆಸಿದ್ದು, ಕಾಬೂಲ್‌ನ ಅತ್ಯಂತ ಸುರಕ್ಷಿತ ಪ್ರದೇಶಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.