ಅಮೆರಿಕ ಅಧ್ಯಕ್ಷ ಜೋ ಬೈಡನ್
– ರಾಯಿಟರ್ಸ್ ಚಿತ್ರ
ವಾಷಿಂಗ್ಟನ್: ನಾಲ್ಕು ವರ್ಷಗಳ ಬಳಿಕ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಅವರು ಮತ್ತೆ ಸ್ಪರ್ಧೆ ಮಾಡಲಿದ್ದಾರೆ ಎಂದು ಅಮೆರಿಕದ ನಿರ್ಗಮಿತ ಅಧ್ಯಕ್ಷ ಜೋ ಬೈಡನ್ ಶುಕ್ರವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ಬಗೆಗಿನ ನಿರ್ಧಾರ ಅವರೇ ತೆಗೆದುಕೊಳ್ಳಲಿದ್ದಾರೆ ಎಂದಿದ್ದಾರೆ.
‘ನಾಲ್ಕು ವರ್ಷಗಳ ಬಳಿಕ ಮತ್ತೆ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವರು ಸಮರ್ಥರಾಗಿದ್ದಾರೆ. ಆ ನಿರ್ಧಾರವನ್ನು ಆವರೇ ತೆಗೆದುಕೊಳ್ಳಬೇಕು’ ಎಂದು ಇಲ್ಲಿನ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಹೇಳಿದ್ದಾರೆ.
2020ರ ಇಂಡೊ– ಆಫ್ರಿಕಾ ಮೂಲದ ಕಮಲಾ ಹ್ಯಾರಿಸ್‌ರನ್ನು ತನ್ನ ಉಪಾಧ್ಯಕ್ಷೆಯನ್ನಾಗಿ ಬೈಡನ್ ನೇಮಕ ಮಾಡಿದ್ದರು. ಆ ಮೂಲಕ ಅಮೆರಿಕದ ಮೊದಲ ಮಹಿಳಾ ಉಪಾಧ್ಯಕ್ಷರು ಎನ್ನುವ ಹೆಗ್ಗಳಿಕೆ ಕಮಲಾ ಪಾಲಾಗಿತ್ತು.
2024ರ ನವೆಂಬರ್‌ನಲ್ಲಿ ಅಧ್ಯಕ್ಷೀಯ ಚುನಾವಣೆ ಸಂವಾದದಲ್ಲಿ ಹಿನ್ನಡೆ ಅನುಭವಿಸಿದ ಬಳಿಕ, ಅಧ್ಯಕ್ಷೀಯ ರೇಸ್‌ನಿಂದ ಹಿಂದೆ ಸರಿದಿದ್ದ ಜೋ ಬೈಡನ್ ಅವರು, ಕಮಲಾ ಹ್ಯಾರಿಸ್ ಅವರನ್ನು ಅಧ್ಯಕ್ಷೀಯ ಅಭ್ಯರ್ಥಿಯಾಗಿ ಅನುಮೋದಿಸಿದ್ದರು. ಅದಾದ ಕೆಲವೇ ದಿನಗಳಲ್ಲಿ ಕಮಲಾ ಅವರು ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು.
ಆದರೆ, ನವೆಂಬರ್ 5ರಂದು ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಸೋತರು. ತಮ್ಮ ಭವಿಷ್ಯದ ಯೋಜನೆಗಳನ್ನು ಕಮಲಾ ಇನ್ನೂ ಘೋಷಣೆ ಮಾಡಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.