ADVERTISEMENT

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಉಮೇದುವಾರಿಕೆ ಸಲ್ಲಿಸಿದ ಕಮಲಾ ಹ್ಯಾರಿಸ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಜುಲೈ 2024, 2:32 IST
Last Updated 27 ಜುಲೈ 2024, 2:32 IST
<div class="paragraphs"><p>ಕಮಲಾ ಹ್ಯಾರಿಸ್‌</p></div>

ಕಮಲಾ ಹ್ಯಾರಿಸ್‌

   

ಚಿತ್ರಕೃಪೆ: X/@KamalaHarris

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಿರುವ ಹಾಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌, ನವೆಂಬರ್‌ನಲ್ಲಿ ನಡೆಯುವ ಚುನಾವಣೆಯಲ್ಲಿ ನಮ್ಮ ಪಕ್ಷವು ಜನರ ವಿಶ್ವಾಸ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ADVERTISEMENT

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಹ್ಯಾರಿಸ್‌, ‘ಇಂದು ನಾನು ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ನನ್ನ ಉಮೇದುವಾರಿಕೆಯನ್ನು ಅಧಿಕೃತವಾಗಿ ಘೋಷಿಸುವ ಕಡತಗಳಿಗೆ ಸಹಿ ಹಾಕಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

‘ಪ್ರತಿ ಮತವನ್ನು ಪಡೆಯಲು ನಾನು ಶ್ರಮಿಸಬೇಕಿದೆ. ಜನಪರವಾದ ನಮ್ಮ ಅಭಿಯಾನಕ್ಕೆ ನವೆಂಬರ್‌ನಲ್ಲಿ ಗೆಲುವಾಗಲಿದೆ’ ಎಂದು ಹೇಳಿದ್ದಾರೆ.

ಏತನ್ಮಧ್ಯೆ, ಹ್ಯಾರಿಸ್‌ ಅವರಿಗೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮ ಮತ್ತು ಪತ್ನಿ ಮಿಚೆಲ್ ಒಬಾಮಾ ಅವರು ಬೆಂಬಲ ಸೂಚಿಸಿದ್ದಾರೆ. ಕಮಲಾ ಅವರು ಅಮೆರಿಕದ ಅಧ್ಯಕ್ಷರಾಗಿ ಚುನಾಯಿತರಾದರೆ ಈ ಸ್ಥಾನಕ್ಕೇರಿದ ಮೊದಲ ಕಪ್ಪುವರ್ಣೀಯ ಮಹಿಳೆ ಎನಿಸಲಿದ್ದಾರೆ.

ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿಯಾಗಲು ಅಗತ್ಯವಿರುವ ಪ್ರತಿನಿಧಿಗಳ ಬೆಂಬಲವನ್ನು ಹ್ಯಾರಿಸ್‌ ಅವರು ಈಗಾಗಲೇ ಗಿಟ್ಟಿಸಿಕೊಂಡಿದ್ದಾರೆ ಎಂದು ಸಮೀಕ್ಷೆಯೊಂದು ತಿಳಿಸಿದೆ. ಆದರೂ, ಈ ಕುರಿತು ಮುಂದಿನ ತಿಂಗಳು ಷಿಕಾಗೊದಲ್ಲಿ ನಡೆಯಲಿರುವ ಡೆಮಾಕ್ರಟಿಕ್‌ ಪಕ್ಷದ ರಾಷ್ಟ್ರೀಯ ಸಮಾವೇಶದಲ್ಲಿ ಅಧಿಕೃತ ಘೋಷಣೆ ಮಾಡಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.