ADVERTISEMENT

ಮಾಲ್‌ನಲ್ಲಿ ಅಗ್ನಿಅವಘಡ: ಸಾವಿನ ಸಂಖ್ಯೆ 55ಕ್ಕೆ ಏರಿಕೆ

ಏಜೆನ್ಸೀಸ್
Published 22 ಜನವರಿ 2026, 16:33 IST
Last Updated 22 ಜನವರಿ 2026, 16:33 IST
   

ಕರಾಚಿ: ಪಾಕಿಸ್ತಾನದ ಕರಾಚಿಯ ಮಾಲ್‌ವೊಂದರಲ್ಲಿ ಕಳೆದ ವಾರ ಸಂಭವಿಸಿದ ಭೀಕರ ಅಗ್ನಿದುರಂತದಲ್ಲಿ ಮೃತಪಟ್ಟವರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ.

ಗುಲ್ ಪ್ಲಾಜಾ ಹೆಸರಿನ ಮೂರು ಅಂತಸ್ತಿನ ಕಟ್ಟಡಕ್ಕೆ ಕಳೆದ ಶನಿವಾರ ರಾತ್ರಿ ಬೆಂಕಿ ಹತ್ತಿಕೊಂಡಿತ್ತು. ಭಾನುವಾರದವರೆಗೂ ಕಟ್ಟಡ ಹೊತ್ತಿ ಉರಿದಿತ್ತು. 

‘ಅವಶೇಷಗಳ ಅಡಿಯಿಂದ ಬುಧವಾರ 25 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಶನಿವಾರ ರಾತ್ರಿಯಿಂದ ಈವರೆಗೆ ಒಟ್ಟು 55 ಮೃತದೇಹಗಳು ಪತ್ತೆಯಾಗಿವೆ’ ಎಂದು ಕರಾಚಿ ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ADVERTISEMENT

‘ಡಿಎನ್‌ಎ ಮಾದರಿಗಳು ತಾಳೆ ಮಾಡಿದ ಬಳಿಕ ಮೃತದೇಹಗಳನ್ನು ಹಸ್ತಾಂತರಿಸಲಾಗುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಾಚರಣೆ ನಿಧಾನವಾಗಿ ನಡೆಯುತ್ತಿರುವ ಬಗ್ಗೆ ಮೃತರ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.