ADVERTISEMENT

POCSO ಆರೋಪಿಯಾಗಿದ್ದ ಮಾಜಿ ಪೊಲೀಸ್ ಅಧಿಕಾರಿ ಸಂತ್ರಸ್ತೆ ಮನೆಯಲ್ಲಿ ಶವವಾಗಿ ಪತ್ತೆ

ಐಎಎನ್ಎಸ್
Published 21 ಫೆಬ್ರುವರಿ 2023, 8:02 IST
Last Updated 21 ಫೆಬ್ರುವರಿ 2023, 8:02 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಕೋಯಿಕ್ಕೋಡ್‌: ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿದ್ದ ಕೇರಳದ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ಬೆಳಗ್ಗೆ ಕೋಯಿಕ್ಕೋಡ್‌ ಬಳಿಯ ಸಂತ್ರಸ್ತೆಯ ಮನೆಯ ಆವರಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ತನ್ನ ನೆರೆ ಮನೆಯವರ ಮಗಳನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಮಾಜಿ ಪೊಲೀಸ್‌ ಅಧಿಕಾರಿ ಕೆ.ಪಿ ಉನ್ನಿ ಅವರು 2021ರಲ್ಲಿ ಬಂಧನವಾಗಿದ್ದರು. ನಂತರ ಅವರು ಜಾಮೀನು ಪಡೆದು ಹೊರಬಂದಿದ್ದರು.

ಆದರೆ, ಮಂಗಳವಾರ ಸಂತ್ರಸ್ತೆಯ ಮನೆಯ ಕಾರು ಪಾರ್ಕಿಂಗ್‌ ಸ್ಥಳದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ADVERTISEMENT

ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಕಂಡುಬಂದಿದ್ದರೂ, ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.