
ಮೊಜತಬಾ ಖಮೇನಿ
ಎಕ್ಸ್ ಚಿತ್ರ
ಟೆಹರಾನ್: ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಹತ್ಯೆ ಬಳಿಕ ಅವರ ಉತ್ತರಾಧಿಕಾರಿಯ ಆಯ್ಕೆ ಬಹುತೇಕ ಖಚಿತಗೊಂಡಿದೆ ಎಂದು ವರದಿಯಾಗಿದೆ.
ಇಸ್ಲಾಮಿಕ್ ರಿಪಬ್ಲಿಕ್ ರಾಷ್ಟ್ರದಲ್ಲಿ ಆಯತೊಲ್ಲಾ ಅಲಿ ಖಮೇನಿ ಅವರ ಪುತ್ರ ಮೊಜತಬಾ ಖಮೇನಿ ಅವರೇ ಉತ್ತರಾಧಿಕಾರಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
ದೇಶದ ಅಸೆಂಬ್ಲಿಯ ತಜ್ಞರ ಮಂಡಳಿಯಿಂದ ಇರಾನ್‌ನ ಪರಮೋಚ್ಚ ನಾಯಕರಾಗಿ ಖಮೇನಿ ಅವರ ಪುತ್ರ 56 ವರ್ಷದ ಮೊಜತಬಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
ಮೊಜತಬಾ ಅವರು ಇರಾನ್‌ನ ರೆವಲ್ಯೂಷನರಿ ಗಾರ್ಡ್‌ನೊಂದಿಗೆ ನಿಕಟ ಬಾಂಧವ್ಯವನ್ನು ಹೊಂದಿದ್ದಾರೆ. ಈ ಬಿಕ್ಕಟ್ಟಿನ ಸಮಯದಲ್ಲಿ ದೇಶವನ್ನು ಮುನ್ನಡೆಸಲು, ದೇಶದ ಭದ್ರತೆ ಹಾಗೂ ಮಿಲಿಟರಿಯ ನಿರ್ವಹಣೆ ಮಾಡಲು ಮೊಜತಬಾ ಅವರಿಗೆ ಸಾಧ್ಯವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಇಸ್ಲಾಮಿಕ್ ರಿಪಬ್ಲಿಕ್ ದೇಶದಲ್ಲಿ ಮೊದಲಿನಿಂದಲೂ ವಂಶಾಡಳಿತಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದ್ದವು. ಹಾಗಾಗಿ ಮೊಜತಬಾ ಅವರಿಗೆ ಅಧಿಕಾರ ನೀಡಿದರೆ ಮತ್ತಷ್ಟು ಪ್ರತಿಭಟನೆಗಳು ನಡೆಯುವ ಆತಂಕವೂ ಇದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಇತ್ತೀಚೆಗೆ ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಆಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.