ADVERTISEMENT

VIDEO| ಉತ್ತರ ಕೊರಿಯಾದ ಸರ್ವಾಧಿಕಾರಿ ನಾಯಕ ಕಿಮ್‌ ಜಾಂಗ್‌ ಉನ್‌ ಪ್ರತ್ಯಕ್ಷ

​ಪ್ರಜಾವಾಣಿ ವಾರ್ತೆ
Published 2 ಮೇ 2020, 11:17 IST
Last Updated 2 ಮೇ 2020, 11:17 IST

ಸಿಯೋಲ್‌: ಉತ್ತರ ಕೊರಿಯಾದ ಸರ್ವಾಧಿಕಾರಿ ನಾಯಕ ಕಿಮ್‌ ಜಾಂಗ್‌ ಉನ್‌ ಅವರು ಮೃತಪಟ್ಟಿದ್ದಾರೆ ಎಂಬ ಊಹಾಪೋಹಗಳು ಎದ್ದಿದ್ದವು. ಇವುಗಳಿಗೆ ತೆರೆ ಎಳೆಯುವಂತೆ ಉತ್ತರ ಕೊರಿಯಾ ಮಾಧ್ಯಮಗಳು ಕಿಮ್‌ ಜಾಂಗ್‌ ಉನ್‌ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿರುವ ಬಗ್ಗೆ ವರದಿ ಮಾಡಿವೆ.

ಸನ್‌ಚೋನ್‌ ನಗರದಲ್ಲಿ ರಸಗೊಬ್ಬರ ಕಾರ್ಖಾನೆಯೊಂದರ ಉದ್ಘಾಟನಾ ಸಮಾರಂಭದಲ್ಲಿ ಕಿಮ್‌ ಜಾಂಗ್‌ ಉನ್‌ ಪಾಲ್ಗೊಂಡಿದ್ದು, ಅವರು ರಿಬ್ಬನ್‌ ಕತ್ತರಿಸುವ ಚಿತ್ರವನ್ನು ಉತ್ತರ ಕೊರೊಯಾ ಮಾಧ್ಯಮಗಳು ಬಿಡುಗಡೆ ಮಾಡಿವೆ.

ರಿಬ್ಬನ್‌ ಕತ್ತರಿಸುವ ಸಮಯದಲ್ಲಿ ಕಿಮ್‌ ಜಾಂಗ್‌ ಉನ್‌ ಅವರ ಸಹೋದರಿ ಕಿಮ್‌ ಯೋ ಜಾಂಗ್‌ ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದಾರೆ.

ADVERTISEMENT

ಕಳೆದ ಏಪ್ರಿಲ್‌ 15ರಿಂದ ಉತ್ತರ ಕೊರೊಯಾ ಸರ್ವಾಧಿಕಾರಿ ನಾಯಕ ಕಿಮ್‌ ಜಾಂಗ್‌ ಉನ್‌ ಅವರ ಆರೋಗ್ಯದ ಬಗ್ಗೆ ಹಲವು ಗಾಳಿಸುದ್ದಿಗಳು ಎದ್ದಿದ್ದವು. ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಕಿಮ್‌ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದವು. ಇನ್ನು ಕೆಲ ಮಾಧ್ಯಮಗಳಲ್ಲಿ ಕಿಮ್‌ ಜಾಂಗ್‌ ಉನ್‌ ಅವರು ಮೃತರಾಗಿದ್ದಾರೆ ಎಂಬ ಸುದ್ದಿಗಳೂ ಸಹ ಪ್ರಕಟವಾಗಿದ್ದವು. ಕಿಮ್‌ ಅವರ ಆರೋಗ್ಯವಾಗಿದ್ದಾರೆಂದು ಉತ್ತರ ಕೊರಿಯಾ ಸರ್ಕಾರ ಹೇಳಿತ್ತು. ಈಗ ಇವೆಲ್ಲ ಗಾಳಿಸುದ್ದಿಗಳಿಗೆ ತೆರೆ ಎಳೆದಂತಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.