ಪಾಕಿಸ್ತಾನ
ಪೆಶಾವರ: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ (ಕೆಪಿಕೆ) ಪ್ರಾಂತ್ಯದ ಮುಖ್ಯಮಂತ್ರಿ ಆಯ್ಕೆ ಸಲುವಾಗಿ ಇತ್ತೀಚೆಗೆ ನಡೆದ ಚುನಾವಣೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಮಂಗಳವಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಜೆಯುಐ–ಎಫ್, ಅದನ್ನು ಅಮಾನ್ಯ ಮತ್ತು ಅನೂರ್ಜಿತ ಎಂದು ಘೋಷಿಸುವಂತೆ ಕೋರಿದೆ.
ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರಿಕ್– ಎ– ಇನ್ಸಾಫ್ (ಪಿಟಿಐ) ಪಕ್ಷದ ಸೊಹೈಲ್ ಅಫ್ರಿದಿ ಅವರು ಸೋಮವಾರ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ವಿಧಾನಸಭಾ ಅಧಿವೇಶನದಲ್ಲಿ 90 ಮತಗಳನ್ನು ಪಡೆದು ಹೊಸ ಮುಖ್ಯಮಂತ್ರಿಯಾಗಿ ಆಯ್ಕೆಯಾದರು. ಇವರ ಆಯ್ಕೆಗೂ ಮುನ್ನ ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡಿದ್ದರು.
ನಿರ್ಗಮಿತ ಮುಖ್ಯಮಂತ್ರಿ ಅಲಿ ಅಮೀನ್ ಗಂಡಾಪುರ ಅವರ ರಾಜೀನಾಮೆ ಔಪಚಾರಿಕವಾಗಿ ಅಂಗೀಕಾರವಾಗಿಲ್ಲ. ಹೀಗಾಗಿ ಹೊಸ ಮುಖ್ಯಮಂತ್ರಿ ಆಯ್ಕೆ ಕ್ರಮಬದ್ಧವಾಗುವುದಿಲ್ಲ ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.