ADVERTISEMENT

ರಾಜತಾಂತ್ರಿಕರ ಭೇಟಿ: ಜಾಧವ್‌ಗೆ ಇಂದು ಅವಕಾಶ

ಪಿಟಿಐ
Published 1 ಸೆಪ್ಟೆಂಬರ್ 2019, 17:45 IST
Last Updated 1 ಸೆಪ್ಟೆಂಬರ್ 2019, 17:45 IST

ಇಸ್ಲಾಮಾಬಾದ್‌: ಗೂಢಚಾರಿಕೆ ಆರೋಪದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್‌ ಜಾಧವ್‌ ಅವರಿಗೆ ಸೋಮವಾರ (ಸೆ.2) ರಾಜತಾಂತ್ರಿಕರ ಭೇಟಿಗೆ ಅವಕಾಶ ನೀಡಲಾಗುವುದು ಎಂದು ಪಾಕಿಸ್ತಾನ ಭಾನುವಾರ ಘೋಷಿಸಿದೆ.

ವಿಯೆನ್ನಾ ಒಪ್ಪಂದ, ಅಂತರರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ಹಾಗೂ ಪಾಕಿಸ್ತಾನದ ಕಾನೂನಿಗೆ ಅನುಗುಣವಾಗಿ ರಾಜತಾಂತ್ರಿಕರ ಭೇಟಿಗೆ ಅನುವು ಮಾಡಿಕೊಡಲಾಗುವುದು ಎಂದು ಪಾಕಿಸ್ತಾನದ ವಿದೇಶಾಂಗ ಇಲಾಖೆಯ ವಕ್ತಾರ ಮೊಹಮ್ಮದ್‌ ಫೈಸಲ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT