ADVERTISEMENT

ಹಣ ಅಕ್ರಮ ವರ್ಗಾವಣೆ | ನೀರವ್‌ ಮೋದಿ ವಿರುದ್ಧ ಸಾಕ್ಷ್ಯಗಳ ಕೊರತೆ

ಪಿಟಿಐ
Published 13 ಮೇ 2020, 1:14 IST
Last Updated 13 ಮೇ 2020, 1:14 IST
ನೀರವ್‌ ಮೋದಿ
ನೀರವ್‌ ಮೋದಿ    

ಲಂಡನ್‌ : ವಜ್ರವ್ಯಾಪಾರಿ ನೀರವ್‌ ಮೋದಿ ವಿರುದ್ಧದ ಹಣ ಅಕ್ರಮ ವರ್ಗಾವಣೆ ಹಾಗೂ ವಂಚನೆ ಆರೋಪವನ್ನು ಸಾಬೀತುಪಡಿಸಲು ಪ್ರಬಲ ಸಾಕ್ಷ್ಯಗಳು ಇಲ್ಲ ಎಂದು ನೀರವ್‌ ಪರ ವಕೀಲರ ತಂಡ ಬ್ರಿಟನ್‌ ಕೋರ್ಟ್‌ಗೆ ಮಂಗಳವಾರ ಹೇಳಿದೆ.

ಪಂಜಾಬ್‌ ನ್ಯಾಷನಲ್‌ ಬ್ಯಾಂಕಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ ನೀರವ್‌ ಮೋದಿ ಹಸ್ತಾಂತರ ಕೋರಿ ಭಾರತ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಲ್ಲಿನ ವೆಸ್ಟ್‌ಮಿನ್‌ಸ್ಟರ್‌ ಮ್ಯಾಜಿಸ್ಟ್ರೇಟ್ಸ್‌ ಕೋರ್ಟ್‌ನಲ್ಲಿ ನಡೆಯುತ್ತಿದೆ.

‘ಈ ಪ್ರಕರಣಕ್ಕೆ ಸಂಬಂಧಿಸಿದ ಆರೋಪಗಳು ಯಾವುವೂ ಸಾಬೀತಾಗಿಲ್ಲ. ನೀರವ್‌ ವಿರುದ್ಧ ತಾನು ಮಾಡುವ ಆರೋಪಗಳನ್ನು ಬಲವಾಗಿ ಸಮರ್ಥಿಸಿಕೊಳ್ಳುತ್ತಿರುವ ಭಾರತ ಸರ್ಕಾರದ ಬಳಿ ಪ್ರಬಲವಾದ ಸಾಕ್ಷ್ಯಗಳೇ ಇಲ್ಲ’ ಎಂದು ನೀರವ್‌ ಪರ ವಕೀಲ ಕ್ಲಾರ್‌ ಮಾಂಟ್‌ಗೊಮೆರಿ ವಾದಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.