ADVERTISEMENT

ಇಂಡೋನೇಷ್ಯಾದಲ್ಲಿ ಭೂಕುಸಿತ: 11 ಮಂದಿ ಸಾವು

ಏಜೆನ್ಸೀಸ್
Published 6 ಮಾರ್ಚ್ 2023, 14:01 IST
Last Updated 6 ಮಾರ್ಚ್ 2023, 14:01 IST
 ಭೂಕುಸಿತದಿಂದ ಉಂಟಾದ ಹಾನಿಯನ್ನು ಜನರು ಪರಿಶೀಲಿಸುತ್ತಿರುವುದು
 ಭೂಕುಸಿತದಿಂದ ಉಂಟಾದ ಹಾನಿಯನ್ನು ಜನರು ಪರಿಶೀಲಿಸುತ್ತಿರುವುದು   

ಜಕಾರ್ತ: ಭಾರಿ ಮಳೆಯಿಂದಾಗಿ ಇಂಡೋನೇಷ್ಯಾದ ನ್ಯಾಟುನಾ ರೀಜೆನ್ಸಿ ಪ್ರದೇಶದಲ್ಲಿ ಉಂಟಾದ ಭೂಕುಸಿತದಲ್ಲಿ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದು, ಸುಮಾರು 50 ಜನರು ನಾಪತ್ತೆಯಾಗಿದ್ದಾರೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಸುತ್ತಮುತ್ತಲಿನ ಬೆಟ್ಟಗಳಿಂದ ಟನ್‌ಗಟ್ಟಲೆ ಮಣ್ಣು ಮನೆಗಳ ಮೇಲೆ ಬಿದ್ದಿದೆ. ರಕ್ಷಣಾ ತಂಡವು ಸದ್ಯ 11 ಮೃತದೇಹಗಳನ್ನು ಹೊರಕ್ಕೆ ತೆಗೆದಿದೆ, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ವಿಪತ್ತು ಪರಿಹಾರ ಸಂಸ್ಥೆಯ ವಕ್ತಾರ ಅಬ್ದುಲ್ ಮುಹಾರಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT