ADVERTISEMENT

ಬಾಂಗ್ಲಾದಲ್ಲಿ ಶೇಖ್ ಹಸೀನಾ ಭರ್ಜರಿ ಜಯ

ಏಜೆನ್ಸೀಸ್
Published 31 ಡಿಸೆಂಬರ್ 2018, 2:43 IST
Last Updated 31 ಡಿಸೆಂಬರ್ 2018, 2:43 IST
ವಿಜಯದ ಸಂಕೇತ ತೋರಿಸುತ್ತಿರುವ ಶೇಖ್ ಹಸೀನಾ
ವಿಜಯದ ಸಂಕೇತ ತೋರಿಸುತ್ತಿರುವ ಶೇಖ್ ಹಸೀನಾ   

ಢಾಕಾ: ನೆರೆಯ ಬಾಂಗ್ಲಾದೇಶದಲ್ಲಿ ಈಚೆಗೆ ನಡೆದ ಚುನಾವಣೆಯಲ್ಲಿಶೇಖ್ ಹಸೀನಾ ನೇತೃತ್ವದ ಆಡಳಿತಾರೂಢ ಅವಾಮಿ ಲೀಗ್ ಪಕ್ಷವು 288 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಬಹುಮತಗಳಿಸಿದೆ. ಬಾಂಗ್ಲಾ ಸಂಸತ್ತಿನ ಒಟ್ಟು ಸದಸ್ಯ ಬಲ 300.

ಪ್ರಮುಖ ಪ್ರತಿಪಕ್ಷ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ ಕೇವಲ 6 ಸ್ಥಾನಗಳಲ್ಲಿ ಮಾತ್ರವೇ ಜಯಗಳಿಸಿದೆ. ಆಡಳಿತಾರೂಢ ಪಕ್ಷ ಚುನಾವಣಾ ಅಕ್ರಮಗಳನ್ನು ನಡೆಸಿದೆ ಎಂದು ಪ್ರತಿಪಕ್ಷಗಳು ಗಂಭೀರ ಆರೋಪ ಮಾಡಿವೆ. ಚುನಾವಣೆ ಸಂದರ್ಭ ನಡೆದ ರಾಜಕೀಯ ಹಿಂಸಾಚಾರದಲ್ಲಿ ಒಟ್ಟು 17 ಮಂದಿ ಮೃತಪಟ್ಟಿದ್ದರು.

ಶೇಖ್ ಹಸೀನಾ ಪ್ರತಿಪಕ್ಷಗಳನ್ನು ಉಗ್ರವಾಗಿ ಹತ್ತಿಕ್ಕಿದ್ದಾರೆ. ಚುನಾವಣೆಗಳು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆದಿಲ್ಲ. ಫಲಿತಾಂಶವನ್ನು ತಡೆಹಿಡಿದು ಶೀಘ್ರ ಮರು ಚುನಾವಣೆ ನಡೆಸಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.