ADVERTISEMENT

ಆರೇ ವಾರಗಳಲ್ಲಿ ರಾಜೀನಾಮೆ ನೀಡಿದ ಬ್ರಿಟನ್ ಪ್ರಧಾನ ಮಂತ್ರಿ ಲಿಜ್ ಟ್ರಸ್– ಕಾರಣ?

ರಾಯಿಟರ್ಸ್
Published 20 ಅಕ್ಟೋಬರ್ 2022, 13:00 IST
Last Updated 20 ಅಕ್ಟೋಬರ್ 2022, 13:00 IST
ಲಿಜ್ ಟ್ರಸ್
ಲಿಜ್ ಟ್ರಸ್   

ಲಂಡನ್: ಇತ್ತೀಚೆಗಷ್ಟೇ ಬ್ರಿಟನ್ ಪ್ರಧಾನ ಮಂತ್ರಿ ಸ್ಥಾನವನ್ನು ಅಲಂಕರಿಸಿದ್ದ ಲಿಜ್ ಟ್ರಸ್ ಅವರು ತಮ್ಮ ಸ್ಥಾನಕ್ಕೆ ಗುರುವಾರ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ.

ಬ್ರಿಟನ್‌ನಲ್ಲಿ ಉಂಟಾಗಿರುವ ತೀವ್ರ ಆರ್ಥಿಕ ಕುಸಿತವನ್ನು ನಿಭಾಯಿಸಲು ಆಗದಿದ್ದಕ್ಕೆಕನ್ಸರ್ವೇಟಿವ್‌ ಪಕ್ಷದ ಟ್ರಸ್ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಆರು ವಾರಗಳ ಹಿಂದೆ ರಿಷಿ ಸುನಕ್ ಅವರನ್ನು ಸೋಲಿಸಿಲಿಜ್ ಟ್ರಸ್ ಅವರು ಬ್ರಿಟನ್ ಪ್ರಧಾನ ಮಂತ್ರಿಯಾಗಿದ್ದರು. ನಾನು ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ಆಗುತ್ತಿಲ್ಲವಾದ್ದರಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಟ್ರಸ್ ಹೇಳಿದ್ದಾರೆ.

ADVERTISEMENT

ಕಳೆದ ತಿಂಗಳುಲಿಜ್‌ ಟ್ರಸ್‌ ಅವರು ಕನ್ಸರ್ವೇಟಿವ್ ಪಕ್ಷದ ನೂತನ ನಾಯಕಿಯಾಗಿ ಆಯ್ಕೆಯಾಗಿದ್ದರು.ಮಾರ್ಗರೇಟ್‌ ಥ್ಯಾಚರ್‌ ಮತ್ತು ಥೆರೆಸಾ ಮೇ ಅವರ ನಂತರ ದೇಶ ಮುನ್ನಡೆಸುವ ಮೂರನೇ ಮಹಿಳಾ ಪ್ರಧಾನಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಬ್ರಿಟನ್‌ ಟೋರಿ ನಾಯಕತ್ವ ಚುನಾವಣಾ ಅಖಾಡದಲ್ಲಿ 47ರ ಹರೆಯದ ಲಿಜ್‌ ಟ್ರಸ್‌ ಅವರಿಗೆ ನಿರೀಕ್ಷಿತ ಗೆಲುವು ಸಿಕ್ಕಿತ್ತು. ಬೋರಿಸ್‌ ಜಾನ್ಸನ್‌ ಅವರ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದ ಭಾರತೀಯ ಮೂಲದ ರಿಷಿ ಸುನಕ್‌ ಅವರನ್ನು ಸುಮಾರು 21 ಸಾವಿರ ಮತಗಳ ಅಂತರದಿಂದ ಮಣಿಸಿ, ಟೋರಿ ನಾಯಕಿ ಮತ್ತು ಬ್ರಿಟನ್‌ ಪ್ರಧಾನಿ ಹುದ್ದೆಯ ಕಿರೀಟ ಮುಡಿಗೇರಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.