ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಲಂಡನ್‌ನಲ್ಲಿರುವ ಬಿಎಪಿಎಸ್ ಸ್ವಾಮಿನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
Photo / X@NeasdenTemple
ಲಂಡನ್: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಬ್ರಿಟನ್‌ಗೆ ಭೇಟಿ ನೀಡಿದ್ದು, ವಾಯವ್ಯ ಲಂಡನ್‌ನಲ್ಲಿ ಬಿಎಪಿಎಸ್ ಸ್ವಾಮಿನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಬಿರ್ಲಾ ಅವರು ಸ್ವಾಮಿನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಕುರಿತು ದೇವಾಲಯದ ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
‘ಭಾರತದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಸ್ವಾಗತಿಸಲು ಸಂತೋಷವಾಯಿತು. ಬಿರ್ಲಾ ಅವರು ಸ್ವಾಮಿನಾರಾಯಣ ಮೂರ್ತಿಗಳ ದರ್ಶನದ ಸಮಯದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಅಭಿಷೇಕವನ್ನು ಮಾಡಿಸಿದ್ದಾರೆ. ಬ್ರಿಟನ್, ಯುರೋಪ್, ಪ್ಯಾರಿಸ್, ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಬಿಎಪಿಎಸ್ ಸ್ವಾಮಿನಾರಾಯಣ ಮಂದಿರದ ಪ್ರಗತಿ ಬಗ್ಗೆ ಮಾಹಿತಿ ಪಡೆದ್ದಾರೆ’ ಎಂದು ದೇವಾಲಯದ ಅಧಿಕಾರಿಗಳು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಓಂ ಬಿರ್ಲಾ ಭೇಟಿಯಿಂದಾಗಿ ಭಾರತ ಮತ್ತು ಬ್ರಿಟನ್ ನಡುವಿನ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ. ಇದಕ್ಕೂ ಮುನ್ನ ಓಂ ಬಿರ್ಲಾ ಅವರು ಶನಿವಾರ ಲಂಡನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ್ದರು.
ಓಂ ಬಿರ್ಲಾ ಅವರು ಬ್ರಿಟನ್, ಸ್ಕಾಟ್ಲೆಂಡ್‌ಗೆ ಐದು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಸ್ಕಾಟ್ಲೆಂಡ್ ಭೇಟಿ ವೇಳೆ ಅಧ್ಯಕ್ಷೆ ಅಲಿಸನ್ ಜಾನ್‌ಸ್ಟೋನ್, ಸ್ಕಾಟ್ಲೆಂಡ್‌ನ ಮೊದಲ ಪ್ರಧಾನಿ ಜಾನ್ ಸ್ವಿನ್ನಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.