
ಲಂಡನ್: ಇಂಗ್ಲೆಂಡ್‌ನಲ್ಲಿ ಜನಾಂಗೀಯ ದ್ವೇಷದ ಕಾರಣಕ್ಕೆ ಅತ್ಯಾಚಾರಗಳು ಮರುಕಳಿಸುತ್ತಿದ್ದು, ಭಾರತೀಯ ಮೂಲದ ಯುವತಿಯೊಬ್ಬರ ಮೇಲೆ ಶನಿವಾರ ಹಲ್ಲೆ ನಡೆದಿದೆ.
ವೆಸ್ಟ್ ಮಿಡ್‌ಲ್ಯಾಂಡ್ಸ್‌ನಲ್ಲಿ ಹಲ್ಲೆಗೊಳಗಾದ ಮಹಿಳೆಯನ್ನು ರಕ್ಷಿಸಲಾಗಿದ್ದು, ಒಬ್ಬ ಶಂಕಿತ(32)ನನ್ನು ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಲ್ಲೆಗೊಳಗಾದ ಮಹಿಳೆ ಪಂಜಾಬ್ ಮೂಲದವರು ಎಂದು ಸ್ಥಳೀಯರು ತಿಳಿಸಿದ್ದಾರೆ.
‘ದಾಳಿಕೋರನು ಸಂತ್ರಸ್ತೆಯ ಮನೆಯ ಬಾಗಿಲನ್ನು ಒಡೆದು ಹಾಕಿದ್ದಾನೆ. ಕಳೆದ ಎರಡು ತಿಂಗಳಲ್ಲಿ ಇಬ್ಬರು ಯುವತಿಯರ ಮೇಲೆ ಜನಾಂಗೀಯ ದ್ವೇಷದ ಕಾರಣಕ್ಕೆ ಅತ್ಯಾಚಾರ ಮತ್ತು ಹಲ್ಲೆ ನಡೆದಿದೆ’ ಎಂದು ಬ್ರಿಟನ್‌ನ ಸಿಖ್ ಸಂಘಟನೆ ಆರೋಪಿಸಿದೆ.
ಸಿ.ಸಿ.ಟಿ.ವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದ ಘಟನೆಯ ದೃಶ್ಯಗಳನ್ನು ಬಿಡುಗಡೆಗೊಳಿಸಿರುವ ಪೊಲೀಸರು ಆರೋಪಿಯ ಬಗ್ಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದರು. ಆ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.