ಲಂಡನ್: ಪೂರ್ವ ಲಂಡನ್‌ನ ಇಲ್‌ಫೋರ್ಡ್‌ನಲ್ಲಿರುವ ಕ್ಲೀವ್‌ಲ್ಯಾಂಡ್ ರಸ್ತೆಯ ಶ್ರೀ ಸೊರಾತಿಯಾ ಪ್ರಜಾಪ್ರತಿ ಸಮುದಾಯ ಭವನದಲ್ಲಿ ಹಿಂದೂ ಸಮಾಜ ಗಣೇಶ ವಿಸರ್ಜನಾ ಮಹೋತ್ಸವದ ಸಂಭ್ರಮದಲ್ಲಿದ್ದ ಸಂದರ್ಭದಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಕೂಡಲೇ ರಕ್ಷಣಾ ಕಾರ್ಯ ಕೈಗೊಂಡ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಟ್ಟಡಕ್ಕೆ ಭಾಗಶಃ ಹಾನಿಯಾಗಿದ್ದು, ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳೀಯರ ಪ್ರಕಾರ ಪಟಾಕಿ ಸಿಡಿತ ಅವಘಡಕ್ಕೆ ಕಾರಣ ಎನ್ನಲಾಗಿದೆ. ಆದರೆ, ಪಟಾಕಿ ಸಿಡಿತದಿಂದಲೇ ಬೆಂಕಿ ಹೊತ್ತಿಕೊಂಡಿರುವುದಕ್ಕೆ ಯಾವುದೇ ಸಾಕ್ಷಿಗಳಿಲ್ಲ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮೆಟ್ರೊಪಾಲಿಟನ್ ಪೊಲೀಸರು ತಿಳಿಸಿದ್ದಾರೆ.
ಇಲ್‌ಫೋರ್ಡ್‌ನಲ್ಲೇ ಭಾರತೀಯ ರೆಸ್ಟೋರೆಂಟ್ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದ್ದ ಘಟನೆ ಕಳೆದ ವಾರ ನಡೆದಿತ್ತು. ಇದೀಗ ಕೆಲವೇ ಕಿಲೋ ಮೀಟರ್ ದೂರ ಇರುವ ಹಿಂದೂ ಸಮುದಾಯ ಭವನದಲ್ಲಿ ಬೆಂಕಿ ಅವಘಡ ಸಂಭವಿಸಿರುವುದು ಆತಂಕ ಮತ್ತು ಅನುಮಾನಕ್ಕೆ ಕಾರಣವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.