ADVERTISEMENT

ಭಾರತದ ಜತೆ ಮತ್ತಷ್ಟು ಬಾಂಧವ್ಯ ವೃದ್ಧಿಗೆ ಆಸಕ್ತಿ: ಇಸ್ರೇಲ್‌ ಪ್ರಧಾನಿ ಬೆನೆಟ್‌

ಇಸ್ರೇಲ್‌ ಪ್ರಧಾನಿ ನಫ್ತಾಲಿ ಬೆನೆಟ್‌

ಪಿಟಿಐ
Published 14 ಜೂನ್ 2021, 11:30 IST
Last Updated 14 ಜೂನ್ 2021, 11:30 IST
ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್‌
ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್‌   

ಜೆರುಸಲೇಂ: ‘ಭಾರತ ಮತ್ತು ಇಸ್ರೇಲ್‌ ನಡುವೆ ವಿಶಿಷ್ಟ ಮತ್ತು ಆತ್ಮೀಯವಾದ ಸಂಬಂಧಗಳನ್ನು ಅಭಿವೃದ್ಧಿಗೊಳಿಸಲು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸೇರಿ ಕೆಲಸ ಮಾಡಲು ಉತ್ಸುಕನಾಗಿದ್ದೇನೆ’ ಎಂದು ಇಸ್ರೇಲ್‌ನ ನೂತನ ಪ್ರಧಾನಿ ನಫ್ತಾಲಿ ಬೆನೆಟ್‌ ಸೋಮವಾರ ಟ್ವೀಟ್‌ ಮಾಡಿದ್ದಾರೆ.

ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಫ್ತಾಲಿ ಬೆನೆಟ್‌ ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್‌ ಮೂಲಕ ಅಭಿನಂದನೆ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸುತ್ತಾ ಬೆನೆಟ್ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಇಸ್ರೇಲ್‌ನ ಹೊಸ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಬೆನೆಟ್ ಅವರನ್ನು ಅಭಿನಂದಿಸಿದ ಮೋದಿ ಅವರು, ‘ಮುಂದಿನ ವರ್ಷ ಎರಡು ದೇಶಗಳ ರಾಜತಾಂತ್ರಿಕ ಸಂಬಂಧಗಳ ಉನ್ನತೀಕರಣದ 30ನೇ ವರ್ಷಾಚರಣೆ ವೇಳೆ ನಾವು ಭೇಟಿಯಾಗೋಣ. ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಸಹಭಾಗಿತ್ವವನ್ನು ಮತ್ತಷ್ಟು ಬಲವಾಗಿಸಲು ನಾನು ಎದುರು ನೋಡುತ್ತಿದ್ದೇನೆ‘ ಎಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

ಇದಕ್ಕೆ ಟ್ವೀಟ್‌ನಲ್ಲಿ ಪ್ರತಿಕ್ರಿಯಿಸಿರುವ ಬೆನೆಟ್‌, ‘ನರೇಂದ್ರ ಮೋದಿಯವರಿಗೆ ಧನ್ಯವಾದಗಳು. ಎರಡು ಪ್ರಜಾಪ್ರಭುತ್ವ ರಾಷ್ಟ್ರಗಳ ನಡುವಿನ ವಿಶಿಷ್ಟ ಮತ್ತು ಆತ್ಮೀಯ ಸಂಬಂಧಗಳನ್ನು ಅಭಿವೃದ್ಧಿಪಡಿಸಲು, ನಿಮ್ಮೊಂದಿಗೆ ಕೆಲಸ ಮಾಡಲು ಉತ್ಸಕನಾಗಿದ್ದೇನೆ‘ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.