
ಭೂಕಂಪ
ಮಾಸ್ಕೊ: ರಷ್ಯಾದ ಪೂರ್ವ ಕರಾವಳಿ ಕಮ್ಚಟ್ಕಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪನ ಶನಿವಾರ ಸಂಭವಿಸಿದೆ.
ಯಾವುದೇ ಪ್ರಾಣಹಾನಿ ಮತ್ತು ಆಸ್ತಿ ಹಾನಿ ಸಂಭವಿಸಿಲ್ಲ. ಪೆಟ್ರೊಪಾವಲೊಸ್ಕ್–ಕಮ್ಚಟ್‌ಸ್ಕಿಯಿಂದ ಪೂರ್ವಕ್ಕೆ 117.7 ಕಿ.ಮೀ ದೂರದಲ್ಲಿ ಭೂಕಂಪನದ ಕೇಂದ್ರಬಿಂದು ಇತ್ತು. 39 ಆಳದಲ್ಲಿ ಕಂಪನ ಸಂಭವಿಸಿದೆ ಎಂದು ಯುಎಸ್ ಭೌಗೋಳಿಕ ಸಮೀಕ್ಷೆ ತಿಳಿಸಿದೆ.
ಸಮುದ್ರಮಟ್ಟದಲ್ಲಿ ಬದಲಾವಣೆಗಳಾಗುವ ಬಗ್ಗೆ ಕರಾವಳಿ ಪ್ರದೇಶಕ್ಕೆ ಜಪಾನ್ ಹವಾಮಾನ ಸಂಸ್ಥೆ ಎಚ್ಚರಿಕೆ ನೀಡಿದೆ. ಆದರೆ ಹಾನಿಯ ಪ್ರಮಾಣ ಕಡಿಮೆ ಇರಲಿದೆ.
ರಷ್ಯಾದ ಕಮ್ಚಟ್ಕಾ ಪ್ರದೇಶದ ಪೂರ್ವ ಭಾಗದಲ್ಲಿ ಶನಿವಾರ ಪ್ರಬಲ ಭೂಕಂಪನವಾಗಿದ್ದು, ಪರ್ಯಾಯ ದ್ವೀಪದಲ್ಲಿ ಸುನಾಮಿ ಅಲೆಗಳು ಕಾಣಿಸಿಕೊಂಡಿವೆ ಎಂದು ವರದಿಯಾಗಿದೆ.
ಇಲ್ಲಿ 1.65 ಲಕ್ಷ ಜನರು ವಾಸವಾಗಿದ್ದಾರೆ. ಭೂಕಂಪನ ಕುರಿತು ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಹಾಗಾಗಿ ಜನರು ಮನೆಗಳು, ಕಚೇರಿಗಳು ಮತ್ತು ಶಾಪಿಂಗ್ ಕೇಂದ್ರಗಳಿಂದ ಹೊರಗೆ ಓಡಿಹೋಗಿದ್ದಾರೆ’ ಎಂದು ರಷ್ಯಾದ ಮಾಧ್ಯಮಗಳು ವರದಿ ಮಾಡಿವೆ.
‘ಭಾರಿ ಪ್ರಮಾಣದ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಆದರೆ, ಸುನಾಮಿ ಎಚ್ಚರಿಕೆ ಘೋಷಿಸಿದ್ದು, ಸಮುದ್ರ ತೀರಗಳಿಗೆ ಹೋಗದಂತೆ ಜನರಲ್ಲಿ ಮನವಿ ಮಾಡಲಾಗಿದೆ’ ಎಂದು ಕಮ್ಚಟ್ಕಾ ಕ್ರೈ ಪ್ರದೇಶದ ಗವರ್ನರ್ ವ್ಲಾಡಿಮಿರ್ ಸೊಲೊಡೋವ್ ತಿಳಿಸಿದ್ದಾರೆ.
ಜುಲೈನಲ್ಲಿ ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದ ಸಮೀಪದಲ್ಲಿ 8.8ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿತ್ತು. ಇದು ಇದುವರೆಗೆ ದಾಖಲಾದ ಅತ್ಯಂತ ಪ್ರಬಲ ಭೂಕಂಪಗಳಲ್ಲಿ ಒಂದಾಗಿತ್ತು. ಜತೆಗೆ, ದೂರದ ಜಪಾನ್, ಹವಾಯಿ ದ್ವೀಪಗಳು ಹಾಗೂ ಪೆಸಿಫಿಕ್ ಸಾಗರದಲ್ಲಿ ಸುನಾಮಿ ಅಲೆಗಳು ಕಾಣಿಸಿಕೊಂಡಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.