ADVERTISEMENT

ಹಿಜಾಬ್ ವಿಚಾರಕ್ಕೆ ಕಾಲೇಜು ಪ್ರವೇಶಿಸುವುದನ್ನು ನಿರ್ಬಂಧಿಸುವುದು ಭಯಾನಕ: ಮಲಾಲ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2022, 5:43 IST
Last Updated 9 ಫೆಬ್ರುವರಿ 2022, 5:43 IST
   

ಬೆಂಗಳೂರು: ರಾಜ್ಯದ ಹಿಜಾಬ್ ಸಂಘರ್ಷದ ಬಗ್ಗೆ ಪಾಕಿಸ್ತಾನದ ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕಿನ ಹೋರಾಟಗಾರ್ತಿ ಮಲಾಲ ಯೂಸುಫ್‌ ಝೈ ಪ್ರತಿಕ್ರಿಯಿಸಿದ್ದಾರೆ.

ಕಾಲೇಜು ನಮ್ಮನ್ನು ವಿದ್ಯಾಭ್ಯಾಸ ಮತ್ತು ಹಿಜಾಬ್ ನಡುವೆ ಆಯ್ಕೆ ಮಾಡಿಕೊಳ್ಳಲುಒತ್ತಾಯಿಸುತ್ತಿದೆ ಎಂಬ ವಿದ್ಯಾರ್ಥಿನಿಯೊಬ್ಬರಹೇಳಿಕೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ.

ಹೆಣ್ಣುಮಕ್ಕಳನ್ನು ಹಿಜಾಬ್ ಧರಿಸಿ ಶಾಲೆಗೆ ಹೋಗಲು ನಿರಾಕರಿಸುವುದು ಭಯಾನಕ ಸಂಗತಿಯಾಗಿದೆ. ಮಹಿಳೆಯರಿಗೆ ನಿರ್ಬಂಧಗಳು ಮುಂದುವರಿಯುತ್ತಿವೆ. ಹೆಚ್ಚು ಅಥವಾ ಕಡಿಮೆ ಬಟ್ಟೆ ಧರಿಸುವ ವಿಚಾರವಾಗಿ ಮುಸ್ಲಿಂ ಮಹಿಳೆಯರನ್ನು ಕಡೆಗಣಿಸುವುದನ್ನು ಭಾರತೀಯ ನಾಯಕರು ನಿಲ್ಲಿಸಬೇಕು ಎಂದು ಮಲಾಲ ಟ್ವೀಟ್ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.