ADVERTISEMENT

ಮಲೇಷ್ಯಾ: ಮಾಜಿ ಪ್ರಧಾನಿ ನಜೀಬ್‌ ಶಿಕ್ಷೆ ಎತ್ತಿ ಹಿಡಿದ ಸುಪ್ರೀಂಕೋರ್ಟ್‌

ಏಜೆನ್ಸೀಸ್
Published 23 ಆಗಸ್ಟ್ 2022, 10:38 IST
Last Updated 23 ಆಗಸ್ಟ್ 2022, 10:38 IST

ಪುತ್ರಜಯ, ಮಲೇಷ್ಯಾ: ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಪ್ರಧಾನಿ ನಜೀಬ್‌ ರಜಾಕ್‌ ಅವರು ದೋಷಿ ಎಂದು ಘೋಷಿಸಿ, 12 ವರ್ಷ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಮಲೇಷ್ಯಾದ ಸುಪ್ರೀಂಕೋರ್ಟ್‌ ಮಂಗಳವಾರ ಎತ್ತಿ ಹಿಡಿದಿದೆ.

ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ನಜೀಬ್‌ ಅವರು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ, ಸುಪ್ರೀಂಕೋರ್ಟ್‌ನ ಐವರು ನ್ಯಾಯಾಧೀಶರನ್ನು ಒಳಗೊಂಡ ಸಮಿತಿಯು, ‘ಈ ಪ್ರಕರಣದಲ್ಲಿ ಹೈಕೋರ್ಟ್‌ ನೀಡಿರುವ ತೀರ್ಪು ಸರಿಯಾಗಿಯೇ ಇದೆ’ ಎಂದು ಹೇಳಿದೆ.

‘ನಜೀಬ್‌ ಅವರ ಮೇಲ್ಮನವಿ ಪರಿಶೀಲನೆಗೆ ಅರ್ಹವಾಗಿಲ್ಲ’ ಎಂದು ಹೇಳಿದ ಸಮಿತಿ, ಶಿಕ್ಷೆಯನ್ನು ಕಾಯಂಗೊಳಿಸಿತು.

ADVERTISEMENT

ಮೇಲ್ಮನವಿ ತಿರಸ್ಕೃತಗೊಂಡಿರುವ ಪರಿಣಾಮ, ನಜೀಬ್‌ ಅವರು ಜೈಲು ಶಿಕ್ಷೆಗೆ ಗುರಿಯಾದ ದೇಶದ ಮೊದಲ ಮಾಜಿ ಪ್ರಧಾನಿ ಎನಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.