ಲಂಡನ್: ಬ್ರಿಟನ್ ಪ್ರಧಾನಿ ಕಿಯರ್ ಸ್ಟಾರ್ಮರ್ ಅವರ ಖಾಸಗಿ ನಿವಾಸಕ್ಕೆ ಬೆಂಕಿ ಹಚ್ಚಿದ ಅನುಮಾನದ ಮೇಲೆ ಯುವಕನೊಬ್ಬನನ್ನು ಮಂಗಳವಾರ ಬಂಧಿಸಲಾಗಿದೆ.
ಸೋಮವಾರ ನಸುಕಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಯಾರೊಬ್ಬರೂ ಗಾಯಗೊಂಡಿಲ್ಲ. ಉತ್ತರ ಲಂಡನ್‌ನಲ್ಲಿರುವ ಮನೆಯ ಬಾಗಿಲಿಗೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಇದರ ಹಿಂದಿರುವವರ ಪತ್ತೆಗಾಗಿ ಭಯೋತ್ಪಾದನಾ ನಿಗ್ರಹ ದಳವು ತನಿಖೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.
ಸ್ಟಾರ್ಮರ್ ಕುಟುಂಬ ಈಗ ಅಲ್ಲಿ ವಾಸಿಸುತ್ತಿಲ್ಲ. ಡೌನಿಂಗ್ ಸ್ಟ್ರೀಟ್‌ನಲ್ಲಿರುವ ಬ್ರಿಟನ್ ಪ್ರಧಾನಿಯ ಅಧಿಕೃತ ನಿವಾಸದಲ್ಲಿ ವಾಸವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.