ADVERTISEMENT

ಇಸ್ರೇಲ್–ಅಮೆರಿಕ ದಾಳಿಯಲ್ಲಿ ಗಾಯಗೊಂಡಿದ್ದ ಖಮೇನಿ ಪತ್ನಿ ಮನ್ಸೌರೆ ಖೋಜಾಸ್ತೆ ಸಾವು

ಏಜೆನ್ಸೀಸ್
Published 2 ಮಾರ್ಚ್ 2026, 14:19 IST
Last Updated 2 ಮಾರ್ಚ್ 2026, 14:19 IST
<div class="paragraphs"><p>ಅಯತೊಲ್ಲಾ ಅಲಿ ಖಮೇನಿ ಮತ್ತು ಅವರ ಪತ್ನಿ ಮನ್ಸೌರೆ ಖೋಜಾಸ್ತೆ ಬಾಗರ್ಜಾಡೆ</p></div>

ಅಯತೊಲ್ಲಾ ಅಲಿ ಖಮೇನಿ ಮತ್ತು ಅವರ ಪತ್ನಿ ಮನ್ಸೌರೆ ಖೋಜಾಸ್ತೆ ಬಾಗರ್ಜಾಡೆ

   

ಟೆಹರಾನ್‌: ಇರಾನ್‌ನ ದಿವಂಗತ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಪತ್ನಿ ಮನ್ಸೌರೆ ಖೋಜಾಸ್ತೆ ಬಾಗರ್ಜಾಡೆ (79) ಅವರು ಸೋಮವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

ಟೆಹರಾನ್‌ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಮನ್ಸೌರೆ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೋಮಾದಲ್ಲಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ.

ADVERTISEMENT

ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯ ಸಮಯದಲ್ಲಿ ಖಮೇನಿ ಅವರೊಂದಿಗೆ ಮನ್ಸೌರೆ ಇದ್ದರು ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.